ಬಾಗಲಕೋಟೆ (ಕೂಡಲಸಂಗಮ) : ವಿವಾದಕ್ಕೆ ಕಾರಣವಾಗಿದ್ದ ‘ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ (ತಿದ್ದುಪಡಿ) ಮಸೂದೆ-2026’ ಅನ್ನು ಸಚಿವ ಸಂಪುಟ ವಾಪಸ್ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಲಾಲ್‌ಬಾಗ್‌ನ ಸೌಂದರ್ಯಕ್ಕೆ ಯಾವುದೇ ರೀತಿಯ ಧಕ್ಕೆ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ಬಾಗಲಕೋಟೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದ ಅವರು. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿಗಳನ್ನು ಅವಲೋಕಿಸಿ, ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ನಂತರ ಮಾದ್ಯಮದವರೊಂದಿಗೆ ಮಾತನಾಡಿ ಲಾಲ್‌ಬಾಗ್ ಸೇರಿದಂತೆ ಸರ್ಕಾರಿ ಉದ್ಯಾನವನಗಳ ಭೂಮಿಯ ಶೇ.5ರಷ್ಟು ಭಾಗವನ್ನು ಸಾರ್ವಜನಿಕ ಉಪಯುಕ್ತತೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಲು ಅವಕಾಶ ಕಲ್ಪಿಸುವ ಉದ್ದೇಶದ ಮಸೂದೆಗೆ ಬಿಜೆಪಿ ಹಾಗೂ ನಾಗರಿಕ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗಸ್ಟ್ ಅಂತ್ಯದಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಮಸೂದೆ ಅಂಗೀಕಾರಗೊಂಡ ಬಳಿಕ ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಹಸಿರು ಪ್ರದೇಶಗಳ ಸಂರಕ್ಷಣೆ ಕುರಿತು ವ್ಯಾಪಕ ಚರ್ಚೆ ನಡೆದಿತ್ತು.
ಸೆಪ್ಟೆಂಬರ್ 3ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಯನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಇದೀಗ ಮಸೂದೆಯನ್ನು ಸಾರ್ವಜನಿಕ ವಲಯಕ್ಕೆ ಬಿಡುಗಡೆ ಮಾಡಿ ಜನರಿಂದ ಸಲಹೆ, ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ. ಬಳಿಕ ಅಗತ್ಯ ತಿದ್ದುಪಡಿಗಳೊಂದಿಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮರುಮಂಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಮಸೂದೆ ವಾಪಸ್ ಪಡೆದಿರುವ ಕುರಿತು ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಲಾಲ್‌ಬಾಗ್‌ನ ಸೌಂದರ್ಯಕ್ಕೆ ಧಕ್ಕೆ ತರುವ ಅಥವಾ ಉದ್ಯಾನವನಗಳಿಗೆ ತೊಂದರೆ ಉಂಟುಮಾಡುವ ಉದ್ದೇಶ ತಮ್ಮ ಸರ್ಕಾರಕ್ಕಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಉದ್ಯಾನವನಗಳ ಜಾಗವನ್ನು ಯಾವ ಉದ್ದೇಶಗಳಿಗೆ ಬಳಸಲಾಗಿದೆ ಎಂಬುದರ ಕುರಿತು ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಬಿಜೆಪಿ ನಾಯಕರು ಬಳಸುತ್ತಿರುವ ಪದಗಳನ್ನು ತಾವು ಬಳಸಲು ಇಷ್ಟಪಡುವುದಿಲ್ಲ ಎಂದಿರುವ ಡಿಕೆಶಿ, ಪ್ರತಿಪಕ್ಷ ನಾಯಕರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಬಿಜೆಪಿ ಹಿಂದೆ ವಿರೋಧ ವ್ಯಕ್ತಪಡಿಸಿತ್ತು ಎಂದು ಆರೋಪಿಸಿರುವ ಅವರು, ‘ಬಿಜೆಪಿಯವರು ಅಭಿವೃದ್ಧಿ ವಿರೋಧಿಗಳು’ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಸೂದೆ ವಿಚಾರವಾಗಿ ಯೂಟರ್ನ್ ಶಿವಕುಮಾರ್ ಅಂತ ಅವರು ಹೇಳುತ್ತಿದ್ದಾರೆ ಆದರೆ ನಾನು ಯಾಕೆ ಯೂಟರ್ನ್ ಆಗಲಿ. ವೈ ಟರ್ನ್ ಆಗಲಿ, ಎಸ್ ಟರ್ನ್ ಆಗಲಿ ಮಾಡಿಲ್ಲ ವೈ, ಯು, ಎಸ್ ಎಲ್ಲವೂ ಅವರ ಬಳಿಯೆ ಇದೆ. ನೀವು ನಮಗೆ ಎಲ್ಲವನ್ನೂ ಎದುರಿಸುವ ಶಕ್ತಿ ನೀಡಿದ್ದಿರಿ ಎಂದರು.
ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ, ಆದರೆ ನಾಗೇಂದ್ರ ಸರ್ಕಾರಕ್ಕೆ ಮುಜುಗರ ಆಗಭಾರದು ಎಂದು ರಾಜಿನಾಮೆ ನೀಡಿದ್ದಾರೆ, ಒಬ್ಬ ನಾಗೇಂದ್ರ ಹೋದರನೆಂತೆ ನೂರು ನಾಗೆಂದ್ರ ನಮ್ಮ ಸರ್ಕಾರದಲ್ಲಿ ಇದ್ದಾರೆ. ನೂರು ನಾಗೇಂದ್ರ ಅವರಿಗೆ ಶಕ್ತಿ ತುಂಬುವಂತ ನಮ್ಮ ಸರ್ಕಾರ ಇದೆ ಎಂದರು.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















