SK Home Ad
Home ಸುದ್ದಿ Samyukta Karnataka News Live: $100 ಮಿಲಿಯನ್ ನಿಧಿ ಸಂಗ್ರಹಿಸಿದ ಬೆಂಗಳೂರ ಮೂಲದ Pixxel

Samyukta Karnataka News Live: $100 ಮಿಲಿಯನ್ ನಿಧಿ ಸಂಗ್ರಹಿಸಿದ ಬೆಂಗಳೂರ ಮೂಲದ Pixxel

0
63

$100 ಮಿಲಿಯನ್ ಸಂಗ್ರಹಿಸಿದ ಬೆಂಗಳೂರು Pixxel : ಬೆಂಗಳೂರು ಮೂಲದ ಸ್ಪೇಸ್‌ಟೆಕ್ ಸ್ಟಾರ್ಟ್‌ಅಪ್ Pixxel $100 ಮಿಲಿಯನ್ ಸರಣಿ-C ನಿಧಿ ಸಂಗ್ರಹಿಸಿದೆ. Temasek ಮತ್ತು Seraphim ನೇತೃತ್ವದಲ್ಲಿ ನಡೆದ ಈ ಹೂಡಿಕೆ ಸುತ್ತು, ಭಾರತದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಅತಿದೊಡ್ಡ ಏಕೈಕ ಫಂಡಿಂಗ್ ರೌಂಡ್ ಆಗಿದೆ. ಹೊಸ ಹೂಡಿಕೆದಾರರಾದ 360 ONE Asset ಮತ್ತು IMM Investment ಸೇರಿದಂತೆ ಹಳೆಯ ಹೂಡಿಕೆದಾರರೂ ಈ ಸುತ್ತಿನಲ್ಲಿ ಭಾಗವಹಿಸಿದ್ದಾರೆ. ಇದರೊಂದಿಗೆ Pixxelನ ಒಟ್ಟು ನಿಧಿ $195 ಮಿಲಿಯನ್‌ಗೆ ಏರಿಕೆಯಾಗಿದೆ. Honeybee ಉಪಗ್ರಹ ಸಮೂಹ, ಹೈ-ರೆಸಲ್ಯೂಷನ್ ಆಪ್ಟಿಕಲ್ ಇಮೇಜಿಂಗ್ ಮತ್ತು Aurora Earth Intelligence ವೇದಿಕೆಯ ವಿಸ್ತರಣೆಗೆ ಹೊಸ ಬಂಡವಾಳ ಬಳಸಲಾಗುವುದು. (ಮಾಹಿತಿ ಅಪ್​ಡೇಟ್ ಆಗಲಿದೆ)

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್‌ ಹತ್ಯೆ : ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಮವಾರ ಬೆಳಗ್ಗೆ ಶಿವಮೊಗ್ಗದಲ್ಲಿ ನಡೆದಿದೆ. ಎನ್‌.ಆರ್‌.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿ ಉಮೇಶ್ ನಾಯ್ಕ್ (27) ಗಾಯಗೊಂಡಿದ್ದಾನೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ಯ ನಿಕೇತನ ಕಟ್ಟಡ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ : ನವದೆಹಲಿಯ ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬರನ್ನು ರಕ್ಷಿಸಿದರೂ ಅವರು ಮೃತಪಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ 11 ಮಂದಿಯನ್ನು ರಕ್ಷಿಸಲಾಗಿದೆ. ಏಮ್ಸ್ ಟ್ರಾಮಾ ಸೆಂಟರ್‌ಗೆ 11 ಗಾಯಾಳುಗಳನ್ನು ದಾಖಲಿಸಲಾಗಿದ್ದು, ಐವರು ಮೃತಪಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಮತ್ತೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರಿಗೆ ಅಂಗ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮತ್ತೊಬ್ಬರನ್ನು ಸಣ್ಣ ಗಾಯಗಳ ಹಿನ್ನೆಲೆಯಲ್ಲಿ ವೀಕ್ಷಣೆಯ ಬಳಿಕ ಬಿಡುಗಡೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದು, ಕಟ್ಟಡ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಟ್ಟಡ ಕುಸಿತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

(ಮಾಹಿತಿ ಅಪ್​ಡೇಟ್ ಆಗಲಿದೆ)

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.