SK Home Ad
Home ಸುದ್ದಿ ಪತ್ನಿ ಕೊಂದು ತಲೆಯನ್ನು ಮಾತ್ರ ಫ್ರಿಡ್ಜ್ ಅಲ್ಲಿ ಇಟ್ಟ ಭೂಪ; 48 ಗಂಟೆ ಬಳಿಕ ಗೊತ್ತಾಗಿದ್ದೇ...

ಪತ್ನಿ ಕೊಂದು ತಲೆಯನ್ನು ಮಾತ್ರ ಫ್ರಿಡ್ಜ್ ಅಲ್ಲಿ ಇಟ್ಟ ಭೂಪ; 48 ಗಂಟೆ ಬಳಿಕ ಗೊತ್ತಾಗಿದ್ದೇ ರೋಚಕ!

0
40

ಗುವಾಹಟಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿಯೋರ್ವ ಆಕೆಯ ರುಂಡವನ್ನು ಫ್ರಿಡ್ಜ್ ನಲ್ಲಿಟ್ಟು ಪರಾರಿಯಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾಗಿ ಕೆಲವೇ ತಿಂಗಳಾಗಿದ್ದ 25 ವರ್ಷದ ಮಹಿಳೆಯೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಿಯಾ ತಾಲುಕ್ದಾರ್ ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ರಾಮಾನುಜನ್‌ ಗೊಸ್ವಾಮಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಸೆಪ್ಟೆಂಬರ್‌ 6 ರಂದು ಅಪಾರ್ಟ್ ಮೆಂಟ್‌ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದರು. ಕಳೆದು ಎರಡು ದಿನದಿಂದ ದಂಪತಿಗಳು ಕಾಣಿಸಿಕೊಂಡಿರಲಿಲ್ಲ ಹಾಗೂ ಅವರ ಫೋನ್ ಆಫ್‌ ಆಗಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದರು.

ಮಾಹಿತಿ ಪಡೆದ ಪೊಲೀಸರು ಮನೆಯ ಬಾಗಿಲು ಒಡೆದು ಒಳಗೆ ನುಗ್ಗಿದಾಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಿಲ್ಲಿ ಪತ್ತೆಯಾಗಿದ್ದು, ದೇಹದ ತಲೆ ಕಾಣೆಯಾಗಿತ್ತು. ನಂತರ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ, ಫ್ರಿಡ್ಜ್‌ನಲ್ಲಿ ಪಾಲಿಥಿನ್ ಚೀಲದಲ್ಲಿ ಇಟ್ಟ ತಲೆ ಪತ್ತೆಯಾಗಿದೆ.

ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಫೊರೆನ್ಸಿಕ್ ತಜ್ಞರು ಕೂಡ ಪರಿಶೀಲನೆ ನಡೆಸಿದ್ದಾರೆ. ರಿಯಾ ಸಾವಿನ ಹಿಂದಿನ ಸಂಪೂರ್ಣ ಕಾರಣ ಹಾಗೂ ಘಟನೆ ನಡೆದ ಸಂದರ್ಭಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಆರೋಪಿಗೆ ತೀವ್ರ ಶೋಧ
ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಸಂಗ್ರಹಿಸಿರುವ ಸಾಕ್ಷ್ಯಗಳು ಮತ್ತು ವಿಚಾರಣೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸರ ಪರಿಶೀಲನೆ ವೇಳೆ ಆಕೆಯ ಪತಿ ಮನೆಯಲ್ಲಿ ಇರಲಿಲ್ಲ. ಶುಕ್ರವಾರದಂದು ಆತನನ್ನು ಕೊನೆಯ ಬಾರಿ ನೋಡಿದ್ದಾಗಿ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಮೃತದೇಹ ಹಾಗೂ ಪತ್ತೆಯಾದ ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.

ಪೊಲೀಸರಿಗೆ ಶರಣಾದ ಆರೋಪಿ
ಭಾನುವಾರ ರಾತ್ರಿ ಮೃತ ಪತಿ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ತನಿಖಾಧಿಕಾರಿಗಳು ಆರೋಪಿಯ ಹೇಳಿಕೆಯನ್ನು ದಾಖಲಿಸಿಕೊಂಡು, ಆತ ನೀಡುವ ಮಾಹಿತಿಯನ್ನು ಇದುವರೆಗೆ ಸಂಗ್ರಹಿಸಿರುವ ಸಾಕ್ಷ್ಯಗಳೊಂದಿಗೆ ಪರಿಶೀಲಿಸುವ ನಿರೀಕ್ಷೆಯಿದೆ.

ಹತ್ಯೆಯ ಹಿಂದಿನ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಅಲ್ಲದೆ, ಆರೋಪಿ ಪೊಲೀಸರಿಗೆ ಶರಣಾಗಲು ಕಾರಣವೇನು ಎಂಬ ಬಗ್ಗೆಯೂ ಯಾವುದೇ ವಿವರ ನೀಡಿಲ್ಲ.
ಘಟನೆಗೆ ಸಂಬಂಧಿಸಿದ ಸಂಪೂರ್ಣ ಸರಣಿ, ಹತ್ಯೆಯ ಹಿಂದಿನ ಕಾರಣ ಹಾಗೂ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನಾದರೂ ಇದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.