ಹುಬ್ಬಳ್ಳಿ: ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿ, ಅದರ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸರು ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿಯ ಈಶ್ವರನಗರ 4ನೇ ಕ್ರಾಸ್ ನಿವಾಸಿ ಗಂಗಾಧರ ತಂದೆ ಆನಂದ ಮಡಿವಾಳರ ಬಂಧಿತ ಆರೋಪಿ.
ಆರೋಪಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸಿದ್ದಲ್ಲದೆ, ಈ ದೃಶ್ಯಗಳ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ‘the_reevu_007’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಕತ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






















