ಧಾರವಾಡ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಸೆಷನ್ಸ್ ಕೋರ್ಟ್‌ಗೆ ಅರ್ಜಿ ಮರುಪರಿಶೀಲನೆ ಮಾಡಿ ಒಂದು ವಾರದಲ್ಲಿ ಆದೇಶ ಹೊರಡಿಸುವಂತೆ ಸೂಚನೆ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿ, ಪ್ರದೋಷ್ ಸಲ್ಲಿಸಿರುವ ಅರ್ಜಿಯನ್ನು ಪುನರ್ ಪರಿಶೀಲಿಸಿ ಒಂದು ವಾರದಲ್ಲಿ ಆದೇಶ ಹೊರಡಿಸಬೇಕು ಎಂದು ಸೆಷನ್ಸ್ ಕೋರ್ಟ್‌ಗೆ ಆದೇಶಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ತನ್ನನ್ನು ಮಾಫಿ ಸಾಕ್ಷಿ ಎಂದು ಪರಿಗಣಿಸುವಂತೆ ಕೋರಿ ಬೆಂಗಳೂರಿನ ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆ ಸೆಷೆನ್ಸ್ ನ್ಯಾಯಾಲಯ ಕೂಡ ಒಪ್ಪಿಗೆ ಕೊಟ್ಟಿತ್ತು. ಆದರೆ, ಇದಕ್ಕೆ ತಡೆ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪು ಮಾತ್ರ ಕಾಯ್ದಿರಿಸಿತ್ತು. ಮಂಗಳವಾರ ಅರ್ಜಿ ಮರುಪರಿಶೀಲನೆ ಮಾಡುವಂತೆ ಸೆಷನ್ಸ್ ಕೋರ್ಟ್‌ಗೆ ಹೈಕೋರ್ಟ್ ಪೀಠ ಆದೇಶಿಸಿದೆ.


















