ಶಾಲೆಯೊಳಗಿನ ಚರ್ಚೆ ಪೊಲೀಸ್ ಠಾಣೆಗೆ: ಶಿಕ್ಷಕರ ದಿನಾಚರಣೆ ಆಚರಣೆಯ ವಿಚಾರವಾಗಿ ದಾಂಡೇಲಿಯ ಬಾಂಗೂರನಗರ ಸರ್ಕಾರಿ ಮಾದರಿ ಹಿರಿಯ ಕನ್ನಡ ಶಾಲೆಯಲ್ಲಿ ಎಸ್‌ಡಿಎಂಸಿ ಹಾಗೂ ಶಿಕ್ಷಕರ ನಡುವೆ ಉಂಟಾದ ಭಿನ್ನಾಭಿಪ್ರಾಯ ಇದೀಗ ಪೊಲೀಸ್ ದೂರು ಮತ್ತು ಇಲಾಖಾ ತನಿಖೆಯ ಹಂತ ತಲುಪಿದೆ. ಸರ್ಕಾರಿ ರಜೆ ಇಲ್ಲದ ಹಿನ್ನೆಲೆಯಲ್ಲಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಶಿಕ್ಷಕರನ್ನು ಸನ್ಮಾನಿಸಲು ಎಸ್‌ಡಿಎಂಸಿ ನಿರ್ಧರಿಸಿತ್ತು ಎನ್ನಲಾಗಿದೆ. ಆದರೆ ಕೆಲ ಶಿಕ್ಷಕರು ಹಳಿಯಾಳದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಗೆ ತೆರಳುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಚರ್ಚೆ ನಡೆದಿತ್ತು. ಈ ವೇಳೆ ಯೂಟ್ಯೂಬರ್ ಒಬ್ಬರು ಅನುಮತಿಯಿಲ್ಲದೆ ಶಾಲಾ ಆವರಣ ಪ್ರವೇಶಿಸಿ ಚಿತ್ರೀಕರಣ ನಡೆಸಿ ಗದ್ದಲಕ್ಕೆ ಕಾರಣರಾದರೆಂಬುದು ಎಸ್‌ಡಿಎಂಸಿ ಆರೋಪ. ಮಹಿಳಾ ಉಪಾಧ್ಯಕ್ಷೆಯೊಂದಿಗೆ ಅವಹೇಳನಕಾರಿಯಾಗಿ ವರ್ತಿಸಿರುವುದಾಗಿಯೂ ಪೊಲೀಸ್ ದೂರು ನೀಡಲಾಗಿದೆ. (ಮಾಹಿತಿ ಅಪ್ಡೇಟ್ ಆಗಲಿದೆ)
ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಜಿಲ್ಲಾ ಸಾರಥಿಗಳು – 35 ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ : ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರ್ನಾಟಕದ 35 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಂಡಿರುವ ‘ಸಂಘಟನಾ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಅಭ್ಯರ್ಥಿಗಳ ಕುರಿತು ವರದಿಗಳನ್ನು ಸಿದ್ಧಪಡಿಸಿದ್ದರು. ಬಳಿಕ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಿ ಅಂತಿಮ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಜನಸೇವೆಯ 100 ದಿನ – ಸಾಮಾಜಿಕ, ಆರ್ಥಿಕ ಸಬಲೀಕರಣಕ್ಕೆ ಡಿಕೆಶಿ ಸಂಕಲ್ಪ : ರಾಜ್ಯದಲ್ಲಿ ತಮ್ಮ ಸಾರ್ವಜನಿಕ ಸೇವೆಯ 100 ದಿನಗಳ ಅವಧಿಯನ್ನು ಸ್ಮರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಾಡಿನ ಜನರನ್ನುದ್ದೇಶಿಸಿ ವಿಶೇಷ ಪತ್ರ ಹಂಚಿಕೊಂಡಿದ್ದಾರೆ. ಈ ಅವಧಿಯಲ್ಲಿ ಕರ್ನಾಟಕವನ್ನು ಮತ್ತಷ್ಟು ದೃಢ ಹಾಗೂ ಸಾಮಾಜಿಕ-ಆರ್ಥಿಕವಾಗಿ ಸಶಕ್ತ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳು ಮತ್ತು ಕ್ರಮಗಳಿಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಪತ್ರದಲ್ಲಿ, “ಪ್ರಜಾಸೇವಕನಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ದೊರೆತು ಇಂದಿಗೆ ನೂರು ದಿನಗಳು. ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಬದಲಾವಣೆ ತರಲು ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ ದಿನಗಳು” ಎಂದು ಡಿ.ಕೆ. ಶಿವಕುಮಾರ್ ಉಲ್ಲೇಖಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಂಕಣ ಬರಹ | `ಕಸ್ತೂರಿ’ಯ ನೆರಳು, ಸಹ್ಯಾದ್ರಿ ಮಲಮಕ್ಕಳ ಅಳಲು : ಇಂದಿನ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾದ ಮೋಹನ ಹೆಗಡೆ ಅವರ ಅಂಕಣದಲ್ಲಿ ಪಶ್ಚಿಮ ಘಟ್ಟದ ಸಂರಕ್ಷಣೆ ಮತ್ತು ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯು ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ತಳಮಳ ಕುರಿತಂತೆ ಲೇಖನ ಮೂಡಿದೆ. ತಲೆತಲಾಂತರಗಳಿಂದ ಅಲ್ಲಿ ಬದುಕುತ್ತಿರುವ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತದೆ ಎಂಬ ಆತಂಕ ಸೃಷ್ಟಿಯಾಗಿದ್ದರೂ, ಅರಣ್ಯ ನಾಶಕ್ಕೆ ಮೂಲ ಕಾರಣ ಬಡ ರೈತರಲ್ಲ, ಬದಲಿಗೆ ಸರ್ಕಾರದ ಅನಿಯಂತ್ರಿತ ಯೋಜನೆಗಳು, ಗಣಿಗಾರಿಕೆ ಮತ್ತು ಬೃಹತ್ ಉದ್ಯಮಗಳು. ಜನರ ವಿಶ್ವಾಸವನ್ನು ಗಳಿಸದೆ ಮತ್ತು ಕೇರಳದ ಮಾದರಿಯಲ್ಲಿ ಸ್ಥಳೀಯ ಗ್ರಾಮ ಸಮಿತಿಗಳ ಸಹಭಾಗಿತ್ವವನ್ನು ಪಡೆದುಕೊಳ್ಳದೆ, ಕೇವಲ ರಾಜಕೀಯ ಪ್ರದರ್ಶನಗಳಿಗೆ ಸೀಮಿತವಾಗುತ್ತಿರುವ ಜನಪ್ರತಿನಿಧಿಗಳ ಧೋರಣೆಯಿಂದಾಗಿ ಈ ಸಮಸ್ಯೆ ದೀರ್ಘಕಾಲದಿಂದ ಬಗೆಹರಿಯದೆ ಉಳಿದಿದೆ. ಪರಿಸರ ಸಂರಕ್ಷಣೆ ಮತ್ತು ಸ್ಥಳೀಯರ ಬದುಕಿನ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಾಮಾಣಿಕ ಇಚ್ಛಾಶಕ್ತಿ ಈಗಿನ ತುರ್ತು ಅಗತ್ಯವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















