SK Home Ad
Home ನಮ್ಮ ಜಿಲ್ಲೆ ಧಾರವಾಡ ಗಣೇಶ ಮೆರವಣಿಗೆಯಲ್ಲಿ ಕಿರಿಕ್: 30 ಸೆಕೆಂಡ್‌ನಲ್ಲೇ ಪೊಲೀಸರ ಲಾಠಿ ಬಿಸಿ

ಗಣೇಶ ಮೆರವಣಿಗೆಯಲ್ಲಿ ಕಿರಿಕ್: 30 ಸೆಕೆಂಡ್‌ನಲ್ಲೇ ಪೊಲೀಸರ ಲಾಠಿ ಬಿಸಿ

0
108

ಹುಬ್ಬಳ್ಳಿ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಕೆಲ ಯುವಕರು ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬಿಸಿ ಯುವಕರಿಗೆ ಬಿಸಿ ಮುಟ್ಟಿಸಿದ್ದಾರೆ.

ಸೆ. 12 ರಂದು ರಾತ್ರಿ 9.30ಕ್ಕೆ ಹುಬ್ಬಳ್ಳಿಯ ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆಯ ಬಳಿ ಮೇದಾರ್ ಓಣಿಯ ಗಣಪತಿ ಮತ್ತು ಕಲಾಲ್ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾದವು.

ಆ ಸಮಯದಲ್ಲಿ ಕಲಾಲ್ ಓಣಿಯ ಗಣಪತಿ ಡಿಜೆ ಮುಂದೆ ಕೆಲವು ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ ಹಿನ್ನೆಲೆಯಲ್ಲಿ 30 ಸೆಕೆಂಡ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಕನಿಷ್ಠ ಬಲಪ್ರಯೋಗ ಮಾಡಿ ಅಲ್ಲಿಂದ ಚದುರಿಸಲಾಯಿತು.

ಈ ಸಂಬಂಧ ಅಪರಿಚಿತ ಕಿಡಿಗೇಡಿಗಳ ವಿರುದ್ಧ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ.