SK Home Ad
Home ನಮ್ಮ ಜಿಲ್ಲೆ ಬೆಳಗಾವಿ ಇ.ಡಿ. ವಿರುದ್ಧ ಸವಾಲಾಕುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ

ಇ.ಡಿ. ವಿರುದ್ಧ ಸವಾಲಾಕುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ

0
56

ಬೆಳಗಾವಿ: ಇ.ಡಿ. (ಜಾರಿ ನಿರ್ದೇಶನಾಲಯ) ಒಂದು ತನಿಖಾ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿಗೆ ಸವಾಲು ಹಾಕುವ ಪ್ರಶ್ನೆಯೇ ಇಲ್ಲ. ಆದರೆ ಕೆಲ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಈ ಕುರಿತು ಸ್ಪಷ್ಟನೆ ನೀಡಿದ ಸಚಿವರು, ಇ.ಡಿ. ದಾಳಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುವ ಕೆಲಸ ಮಾಡಿದ್ದೇವೆ. ಆದರೆ ತನಿಖಾ ಸಂಸ್ಥೆಯ ಕಾರ್ಯವೈಖರಿ ಪ್ರಶ್ನಿಸುವ ಉದ್ದೇಶ ನಮಗಿಲ್ಲ. ಇ.ಡಿ. ತನ್ನ ತನಿಖೆ ನಡೆಸುತ್ತಿದೆ. ಈ ನಡುವೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಕೆಲವು ಮಾಹಿತಿಗಳು ವಾಸ್ತವಾಂಶಕ್ಕೆ ದೂರವಾಗಿವೆ ಎಂದು ಹೇಳಿದರು.

ನಾವು ನೀಡುವ ಹೇಳಿಕೆ ಯಥಾವತ್ತಾಗಿ ರಾಜ್ಯದ ಜನರಿಗೆ ತಿಳಿಸಿದರೆ ಒಳ್ಳೆಯದು. ಅದನ್ನು ಬಿಟ್ಟು ಸತ್ಯಕ್ಕೆ ದೂರವಾದ ವಿಷಯ ಪ್ರಕಟಿಸಿದರೆ ಗೊಂದಲಕ್ಕೆ ಕಾರಣವಾಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.

ʻಸವಾಲುʼ ಎಂಬ ಪದವನ್ನು ನಾವು ಎಲ್ಲಿಯೂ ಬಳಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದು ಇ.ಡಿ. ಒಂದು ತನಿಖಾ ಸಂಸ್ಥೆಯಾಗಿದ್ದು, ಅದಕ್ಕೆ ಸವಾಲು ಹಾಕುವ ಪ್ರಶ್ನೆಯೇ ಬರುವುದಿಲ್ಲ. ಸತ್ಯಕ್ಕೆ ದೂರವಾದ ಹೇಳಿಕೆ ಪ್ರಕಟಿಸುವುದರಿಂದ ದೊಡ್ಡ ಅನಾಹುತಗಳಿಗೆ ಕಾರಣವಾಗುವ ಸಾಧ್ಯತೆಗಳಿವೆ ಎಂದು ಸಚಿವರು ಹೇಳಿದರು.