SK Home Ad
Home ನಮ್ಮ ಜಿಲ್ಲೆ ಧಾರವಾಡ ಪತ್ನಿಗೆ ಡಿವೋರ್ಸ್ ನೀಡಲು ನಿರಾಕರಣೆ: ಪತಿಯ ಮೇಲೆ ಮಾರಣಾಂತಿಕ ಹಲ್ಲೆ

ಪತ್ನಿಗೆ ಡಿವೋರ್ಸ್ ನೀಡಲು ನಿರಾಕರಣೆ: ಪತಿಯ ಮೇಲೆ ಮಾರಣಾಂತಿಕ ಹಲ್ಲೆ

0
78

ಧಾರವಾಡ: ಪತ್ನಿಗೆ ವಿವಾಹ ವಿಚ್ಛೇದನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತ್ನಿಯ ಕಡೆಯವರು ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಧಾರವಾಡದ ಮೆಹಬೂಬ ನಗರದ ನಿವಾಸಿ ಶಶಿಧರ ಶಿರಾಳೆ ಎಂಬಾತನ ಮೇಲೆಯೇ ಪತ್ನಿಯ ಕಡೆಯವರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳ ಹಿಂದೆ ಶಶಿಧರ ಮತ್ತು ಆತನ ಪತ್ನಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ಪತ್ನಿ ವಿವಾಹ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಅಲ್ಲದೇ ಶಶಿಧರ ವಿಚ್ಛೇಧನ ನೀಡಲು ನಿರಾಕರಿಸಿದ್ದರು ಎನ್ನಲಾಗಿದೆ. ಆದರೆ, ಮಂಗಳವಾರ ವಿಚಾರಣೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಆರು ಜನರಿದ್ದ ಗುಂಪೊಂದು ಇಲ್ಲಿಯ ಎಸ್‌ಬಿಐ ಮುಖ್ಯ ಕಚೇರಿ ಬಳಿ ಶಶಿಧರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಇದರಿಂದ ತಲೆ ಮತ್ತು ಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.