ಭಾರತೀಯ ಮಹಿಳಾ ಫುಟ್‌ಬಾಲ್ ಆಟಗಾರ್ತಿ ದಲಿಮಾ ಛಿಬ್ಬರ್ ನೋವಾ ಸ್ಪೋರ್ಟ್ಸ್‌ನಲ್ಲಿ ಮಹತ್ವದ ಹೊಣೆ : ಭಾರತೀಯ ಮಹಿಳಾ ಫುಟ್‌ಬಾಲ್ ತಂಡದ ಪ್ರಮುಖ ಆಟಗಾರ್ತಿ ದಲಿಮಾ ಛಿಬ್ಬರ್ ಅವರು ನೋವಾ ಸ್ಪೋರ್ಟ್ಸ್ ಸಂಸ್ಥೆಯಲ್ಲಿ ‘ಫುಟ್‌ಬಾಲ್ ಸಂಸ್ಕೃತಿ ಮತ್ತು ಆಟಗಾರರ ಅಭಿವೃದ್ಧಿ ಹಾದಿ’ (Football Culture & Player Pathways Lead) ವಿಭಾಗದ ಮುಖ್ಯಸ್ಥೆಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಭಾರತದಲ್ಲಿ ಹೆಣ್ಣುಮಕ್ಕಳ ಫುಟ್‌ಬಾಲ್‌ಗೆ ತಳಮಟ್ಟದಿಂದಲೇ ಬಲ ನೀಡುವುದು ಹಾಗೂ ಮುಂದಿನ ಪೀಳಿಗೆಯ ಆಟಗಾರ್ತಿಯರನ್ನು ಸೂಕ್ತ ತರಬೇತಿ ಮತ್ತು ಮಾರ್ಗದರ್ಶನದೊಂದಿಗೆ ಸಿದ್ಧಪಡಿಸುವುದು ಈ ಹೊಸ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬದ್ಧ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್ ಡಿಬಿ) ಸ್ಥಾಪನೆ ಮಾಡಿ ವಾರ್ಷಿಕ ₹5000 ಕೋಟಿ ನೀಡಲಾಗುತ್ತಿದೆ ಎಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯಸಿಂಗ್ ತಿಳಿಸಿದರು. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ ಧರ್ಮಸಿಂಗ್ ಅವರು ಧ್ವಜಾರೋಹಣ ನೆರವೇರಿಸಿ,ಪೊಲೀಸರು ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿ ರಾಯಚೂರು ಜಿಲ್ಲೆಗೆ 2025-26ನೇ ಸಾಲಿನಲ್ಲಿ ಒಟ್ಟು 622 ಕೋಟಿ ಅನುದಾನಕ್ಕೆ 890 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಲಾಗಿದೆ ಇದರಲ್ಲಿ 61 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 394 ಕಾಮಗಾರಿ ಪ್ರಗತಿಯಲ್ಲಿದೆ, 435 ಕಾಮಗಾರಿಗಳು ಪ್ರಾರಂಭಿಸಬೇಕಿದೆ. ಒಟ್ಟು 178 ಕೋಟಿ ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮೋದಿಯವರ ಜನ್ಮದಿನದಂದು ಶುಭಾಶಯಗಳ ಮಹಾಪೂರ : ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದ್ದು, 2001ರಿಂದ ಸಾರ್ವಜನಿಕ ಜೀವನದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅವರ 25 ವರ್ಷಗಳ ಪಯಣವನ್ನು ಗುರುತಿಸುವ ‘ಸೇವಾ ಸಂಕಲ್ಪ ಅಭಿಯಾನ’ ಸೆಪ್ಟೆಂಬರ್ 17ರಿಂದ ಆರಂಭವಾಗಿದೆ. ಈ ಅಭಿಯಾನ ಅಕ್ಟೋಬರ್ 17ರವರೆಗೆ ನಡೆಯಲಿದೆ. ಅಭಿಯಾನದ ಭಾಗವಾಗಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಮರ ನೆಡುವ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ವಡ್ನಗರ ಮತ್ತು ವಾರಣಾಸಿಯನ್ನು ಸಂಪರ್ಕಿಸುವ ಬೈಕ್ ಯಾತ್ರೆಯೂ ಪ್ರಮುಖ ಕಾರ್ಯಕ್ರಮವಾಗಿದೆ. ಮೋದಿ ಅವರ ಜನ್ಮಸ್ಥಳವಾದ ವಡ್ನಗರದಿಂದ ಹಾಗೂ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಿಂದ ಬೈಕ್ ರ್ಯಾಲಿಗಳು ಆರಂಭವಾಗಿದ್ದು, ಎರಡೂ ದಿಕ್ಕುಗಳಿಂದ ನಡೆಯುವ ಈ ಯಾತ್ರೆಗಳು ಅಕ್ಟೋಬರ್ 7ರ ವೇಳೆಗೆ ವಡ್ನಗರದಲ್ಲಿ ಸೇರುವ ಯೋಜನೆ ಇದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕಲ್ಯಾಣ ಕರ್ನಾಟಕದಲ್ಲಿ ಎಕಾನಮಿ ಮಿಷನ್ – ಸಿಎಂ ಡಿ ಕೆ ಶಿವಕುಮಾರ್ ಹಲವು ಯೋಜನೆ ಘೋಷಣೆ : ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹತ್ತು ಪ್ರಮುಖ ಯೋಜನೆಗಳನ್ನು ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಈ ಮಿಷನ್ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಈ ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ ಎಂದಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಿ : ದ್ವೈತ ಸಿದ್ಧಾಂತ ಪ್ರತಿಪಾದಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘದ ಪ್ರಮುಖರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಹುಬ್ಬಳ್ಳಿ ತಾಲೂಕಿನಲ್ಲಿ ಖತರ್ನಾಕ್ ಕಳ್ಳರ ಅಟ್ಟಹಾಸ : ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ಖದೀಮರ ಹಾವಳಿ ಮತ್ತೆ ಶುರುವಾಗಿದೆ. ತಾಲೂಕಿನ ಸುಳ್ಳ ಮತ್ತು ಬ್ಯಾಹಟ್ಟಿ ಗ್ರಾಮಗಳಲ್ಲಿ ಒಂದೇ ರಾತ್ರಿ ಎರಡು ಕೆನರಾ ಬ್ಯಾಂಕ್ ಎಟಿಎಂಗಳನ್ನು ಲೂಟಿ ಮಾಡಲಾಗಿದೆ. ಸುಳ್ಳ ಗ್ರಾಮದಲ್ಲಿನ ಎಟಿಎಂನಲ್ಲಿ 11 ಲಕ್ಷ, ಬ್ಯಾಹಟ್ಟಿ ಗ್ರಾಮದ ಎಟಿಎಂನಲ್ಲಿ 3 ಲಕ್ಣ ಸೇರಿ ಒಟ್ಟು 14 ಲಕ್ಣ ದೋಚಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದು 79ನೇ ಕಲ್ಯಾಣ ಕರ್ನಾಟಕ ಉತ್ಸವ : ಹೈದರಾಬಾದ್ ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕ ಭಾಗ ವಿಮೋಚನೆಗೊಂಡ ಐತಿಹಾಸಿಕ ದಿನದ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಇಂದು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಸಂಸ್ಥಾನ ಭಾರತೀಯ ಒಕ್ಕೂಟಕ್ಕೆ ವಿಲೀನಗೊಂಡ ಹಿನ್ನೆಲೆಯಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಂಕಣ ಬರಹ | ಬರದ ಬರೆಯ ನಡುವೆ `ಬರ ರಾಜಕೀಯ’: ಸಂಯುಕ್ತ ಕರ್ನಾಟಕ ಕಾರ್ಯನಿರ್ವಾಹಕ ಹಾಗೂ ಸಂಪಾದಕ ಮೋಹನ ಹೆಗಡೆ ಅವರು ಇಂದಿನ ತಮ್ಮ ಜನಾಶಯ ಅಂಕಣವು ರಾಜ್ಯದಲ್ಲಿ ಎದುರಾಗಿರುವ ಭೀಕರ ಅನಾವೃಷ್ಟಿ ಮತ್ತು ಬರ ಪರಿಸ್ಥಿತಿಯನ್ನು ರಾಜಕೀಯ ಪಕ್ಷಗಳು ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿವೆ ಎಂಬುದನ್ನು ಕನ್ನಡಿಯ ಹಿಡಿದಂತೆ ತೋರಿಸುತ್ತದೆ. ರಾಜಕೀಯ ಪಕ್ಷಗಳು ಬರದ ರಾಜಕೀಯವನ್ನು ಬಿಟ್ಟು ಜನರ ಕಣ್ಣೀರು ಒರೆಸುವ ನೈಜ ಇಚ್ಛಾಶಕ್ತಿ ಮತ್ತು ಮುತ್ಸದ್ದಿತನವನ್ನು ಪ್ರದರ್ಶಿಸಬೇಕೆಂದು ಅಂಕಣಕಾರರು ಎಚ್ಚರಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















