SK Home Ad
Home ಸುದ್ದಿ Samyukta Karnataka News Live: ಕರಾವಳಿಯಲ್ಲಿ ಇಂದು ಕರ್ನಾಟಕ ಸರ್ಕಾರ – ಮಂಗಳೂರಿನಲ್ಲಿ ಮೊದಲ ಸಚಿವ...

Samyukta Karnataka News Live: ಕರಾವಳಿಯಲ್ಲಿ ಇಂದು ಕರ್ನಾಟಕ ಸರ್ಕಾರ – ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ

0
88
ಮಂಗಳೂರಿನಲ್ಲಿ ಇಂದು ಐತಿಹಾಸಿಕ ಕ್ಯಾಬಿನೆಟ್‌ ಸಭೆ: ಕರಾವಳಿಯ ಹಲವು ಬೇಡಿಕೆಗಳತ್ತ ಸರ್ಕಾರದ ಗಮನ

Google Payಗೆ ಭಾರತದಲ್ಲಿ 9ರ ಸಂಭ್ರಮ – ಹೊಸ AI ಫೀಚರ್‌ಗಳೊಂದಿಗೆ ಮುಂದುವರಿದ ಪಯಣ : ಭಾರತದಲ್ಲಿ Google Pay ತನ್ನ ಸೇವೆಯ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ Google India ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಶುಭಾಶಯ ಸಂದೇಶವನ್ನು ಹಂಚಿಕೊಂಡಿದೆ. 9 ವರ್ಷಗಳ ಹಿಂದೆ ಭಾರತದಲ್ಲಿ ಆರಂಭವಾದ ಡಿಜಿಟಲ್ ಪಾವತಿ ಸೇವೆಯ ಪಯಣವನ್ನು ನೆನಪಿಸಿಕೊಂಡಿರುವ ಈ ಪೋಸ್ಟ್ ಇದೀಗ ಗಮನ ಸೆಳೆಯುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಧರಿಗಾಗಿ ಹೊಸ ತಂತ್ರಜ್ಞಾನ – ಮಾತನ್ನು ಬ್ರೈಲ್ ಆಗಿಸುವ RUDHRA ಪ್ರಿಂಟರ್ ಆವಿಷ್ಕಾರಕ್ಕೆ ಜೇಮ್ಸ್ ಡೈಸನ್ ಪ್ರಶಸ್ತಿ : ತಂತ್ರಜ್ಞಾನವನ್ನು ಬಳಸಿಕೊಂಡು ದೃಷ್ಟಿಹೀನರಿಗೆ ಬ್ರೈಲ್ ಬರವಣಿಗೆಯನ್ನು ಸುಲಭಗೊಳಿಸುವ ನವೀನ ಸಾಧನ ಅಭಿವೃದ್ಧಿಪಡಿಸಿರುವ ಆಂಧ್ರಪ್ರದೇಶದ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಲಿಂಗಂಪಳ್ಳಿ ಹಿಮಜಾ ಅವರು 2026ರ ಭಾರತ ವಿಭಾಗದ ಜೇಮ್ಸ್ ಡೈಸನ್ ಪ್ರಶಸ್ತಿ ಗೆದ್ದಿದ್ದಾರೆ. ಅವರು ಅಭಿವೃದ್ಧಿಪಡಿಸಿರುವ RUDHRA ಎಂಬ ಧ್ವನಿ-ನಿಯಂತ್ರಿತ ಬ್ರೈಲ್ ಪ್ರಿಂಟರ್ ಮಾತನ್ನು ಪಠ್ಯವಾಗಿ ಪರಿವರ್ತಿಸಿ, ಅದನ್ನು ಬ್ರೈಲ್ ರೂಪದಲ್ಲಿ ಕಾಗದದ ಮೇಲೆ ಮುದ್ರಿಸುವ ಸಾಮರ್ಥ್ಯ ಹೊಂದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆಕ್ಸಲ್ ಬ್ಲೇಡ್ ಕಟ್ ಆಗಿ ಸಾರಿಗೆ ಬಸ್ ಪಲ್ಟಿ : ಬಸ್‌ನ ಆಕ್ಸಲ್ ಬ್ಲೇಡ್ ಕಟ್ ಆಗಿ ಸರ್ಕಾರಿ ಸಾರಿಗೆ ಬಸ್‌ವೊಂದು ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ನಡೆದಿದೆ. ಹಗರಿಬೊಮ್ಮನಹಳ್ಳಿಯಿಂದ ತಂಬ್ರಹಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ ಆಕ್ಸಲ್ ಬ್ಲೇಡ್ ಕಟ್ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿಲ್ಲ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಯಾವುದೇ ಪಕ್ಷದ ನಾಯಕರು ಗಾಬರಿಯಾಗಬೇಕಿಲ್ಲ’ – ಮಂಗಳೂರಿನಲ್ಲಿ ಡಿಕೆಶಿ : ಕರಾವಳಿ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಮಂಗಳೂರಿನಲ್ಲಿ ಇಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ. ಮಂಗಳೂರಿನ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು ಜನರ ಬದುಕು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು. “ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಅವರು ಭರವಸೆ ನೀಡಿದರು.ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ಇಂದು ಮೊದಲ ರಾಜ್ಯ ಸಚಿವ ಸಂಪುಟ ಸಭೆ : ಕರಾವಳಿ ಭಾಗದ ಜನರ ಬಹುದಿನಗಳ ಆಶಯ, ನಿರೀಕ್ಷೆ ಹಾಗೂ ಅಭಿವೃದ್ಧಿಯ ಬೇಡಿಕೆಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಇಂದು (ಸೆ.18) ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕರಾವಳಿ ಅಭಿವೃದ್ಧಿಯ ದೃಷ್ಟಿಯಿಂದ ಸಭೆ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಮಂಗಳೂರಿಗೆ ಆಗಮಿಸಿದ್ದು, ಸಭೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸಭೆ ನಡೆಯಲಿದೆ. ಸಚಿವರ ಆಗಮನದ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ಬದಲಾವಣೆಗಳನ್ನೂ ಮಾಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

(ಮಾಹಿತಿ ಅಪ್​ಡೇಟ್ ಆಗಲಿದೆ)

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.