ಕೊಪ್ಪಳ: ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕಿಷ್ಕಿಂಧೆ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪ್ರಕಟಿಸಿದರು.
ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ನಡೆದ, `ಪ್ರಜಾಸೇವಾ ಆಂದೋಲನ ಸಭೆ’ ಉದ್ಘಾಟಿಸಿ ಅವರು ಮಾತನಾಡಿದರು. ಕಲಬುರಗಿ, ಬೆಳಗಾವಿ ಹಾಗೂ ಮೈಸೂರು ಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಇದೇ ಮಾದರಿಯಲ್ಲಿ ರಾಜ್ಯದ 15 ಕಡೆ ಸಚಿವ ಸಂಪುಟ ಸಭೆ ನಡೆಸುವ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಲಾಗಿದೆ ಎಂದರು.





















