ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ : ಬಿಹಾರ, ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ವಿಧಾನ ಪರಿಷತ್ತುಗಳ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ತೆರವಾಗಲಿರುವ ಸ್ಥಾನಗಳಿಗೆ ಅಕ್ಟೋಬರ್ 23, 2026ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕುಷ್ಟಗಿಯನ್ನು ಬರ ಪಟ್ಟಿಗೆ ಸೇರಿಸಲು ಕ್ರಮ – ಅಮರೇಗೌಡ ಬಯ್ಯಾಪುರ ಮನವಿಗೆ ಡಿಸಿಎಂ ಭರವಸೆ : ಮಳೆ ಆಶ್ರಿತ ಪ್ರದೇಶವಾಗಿರುವ ಕುಷ್ಟಗಿ ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಮಾಜಿ ಸಚಿವ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪುರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿದ ಅಮರೇಗೌಡ ಬಯ್ಯಾಪುರ ಅವರು, ಕುಷ್ಟಗಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮಕ್ಕಳ ಜೊತೆ ಕುಳಿತು ಉಪಾಹಾರ ಸೇವಿಸಿದ ಸಿಎಂ ವಿಜಯ್ : ತಮಿಳುನಾಡಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಉಪಾಹಾರ ಒದಗಿಸುವ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ಚೆನ್ನೈನಲ್ಲಿ ವಿಸ್ತರಿತ ‘ಪೆರುಂತಲೈವರ್ ಕಾಮರಾಜರ್ ಉಚಿತ ಉಪಾಹಾರ ಯೋಜನೆ’ಗೆ ಚಾಲನೆ ನೀಡಿದರು. ಚೆನ್ನೈನ ತಿರುವಣ್ಮಿಯೂರ್‌ನ ಗಾಂಧಿ ಗ್ರಾಮಂ ಸರ್ಕಾರಿ ಮಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ವಿದ್ಯಾರ್ಥಿಗಳಿಗೆ ಸ್ವತಃ ಉಪಾಹಾರ ಬಡಿಸಿದರು. ಬಳಿಕ ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವಿಸಿದರು. ಶಾಲೆಯ ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಉಪಾಹಾರ ವ್ಯವಸ್ಥೆಯನ್ನೂ ಪರಿಶೀಲಿಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್ – ಕಲಬುರಗಿ, ಹುಬ್ಬಳ್ಳಿ ಸೇರಿ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ : ಅಕ್ರಮ ಆಸ್ತಿ ಗಳಿಕೆ ಮತ್ತು ಲಂಚದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರ ಮುಂಜಾನೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : ಹುಬ್ಬಳ್ಳಿಯ ಹೆಸ್ಕಾಂ ಎಇಇ ಮನೆ ಹಾಗೂ ಕಚೇರಿ, ಧಾರವಾಡದ ಸಹೋದರನ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಹೆಸ್ಕಾಂ ಎಇಇ ಕಿರಣಕುಮಾರ್ ಬೈಂದೂರ್ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕಾರು-ಬೈಕ್ ಡಿಕ್ಕಿ – ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು : ದಾವಣಗೆರೆ: ತಾಲ್ಲೂಕಿನ ಕೊಗ್ಗನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ನಾಗರಾಜಪ್ಪ ಅವರ ಪುತ್ರಿ, ದಾವಣಗೆರೆಯ ಎವಿಕೆ ಕಾಲೇಜಿನ ವಿದ್ಯಾರ್ಥಿನಿ ಋತು (17) ಎಂದು ಗುರುತಿಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
(ಮಾಹಿತಿ ಅಪ್ಡೇಟ್ ಆಗಲಿದೆ)






















