ರಾಷ್ಟ್ರೀಯ ಪ್ರಶಸ್ತಿ ಗೆದ್ದು ಮಂಗಳೂರಿಗೆ ಮರಳಿದ ‘ಮಿಥ್ಯ’ ತಂಡ : 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕನ್ನಡದ ‘ಮಿಥ್ಯ’ ಚಿತ್ರದ ತಂಡದ ಸದಸ್ಯರು ಬುಧವಾರ ಮಂಗಳೂರಿಗೆ ಮರಳಿದರು. ಖ್ಯಾತ ರಂಗಭೂಮಿ ಕಲಾವಿದೆ ಹಾಗೂ ಪೋಷಕ ನಟಿ ರೂಪಶ್ರೀ ವರ್ಕಾಡಿ, ಬಾಲನಟ ಆತೀಶ್ ಎಸ್. ಶೆಟ್ಟಿ, ಚಿತ್ರದ ಬರಹಗಾರ ಹಾಗೂ ನಿರ್ದೇಶಕ ಸುಮಂತ್ ಭಟ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತ್ಮೀಯರು, ಹಿತೈಷಿಗಳು ಹಾಗೂ ಅಭಿಮಾನಿಗಳು ಸ್ವಾಗತ ಕೋರಿದರು. ‘ಮಿಥ್ಯ’ ಚಿತ್ರವು 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಮೂರು ಪ್ರಮುಖ ಗೌರವಗಳನ್ನು ಪಡೆದುಕೊಂಡಿದೆ. ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಲಭಿಸಿದ್ದು, ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಆತೀಶ್ ಎಸ್. ಶೆಟ್ಟಿ ಅವರಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಗಳನ್ನು ಸೆಪ್ಟೆಂಬರ್ 22ರಂದು ಗುಜರಾತ್ನ ಏಕ್ತಾ ನಗರದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಈ ಭಾನುವಾರ ಬ್ಯಾಂಕ ಓಪನ್ ಇರಲಿದೆ : ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸೆಪ್ಟೆಂಬರ್ 28ರಿಂದ 30ರವರೆಗೆ ಪ್ರಸ್ತಾವಿತವಾಗಿರುವ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 27ರ ಭಾನುವಾರ ಸಾರ್ವಜನಿಕ ವಲಯದ ಬ್ಯಾಂಕುಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಶಾಖೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಅನುಮೋದನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 28, 29 ಮತ್ತು 30ರಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ ಸಿಬ್ಬಂದಿಗೆ ಐದು ದಿನಗಳ ಕೆಲಸದ ವಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹಣಕಾಸು ಸಚಿವಾಲಯವು ಮುಷ್ಕರದಿಂದ ಹಿಂದೆ ಸರಿದು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸುವಂತೆ ಬ್ಯಾಂಕ್ ಸಿಬ್ಬಂದಿ ಮತ್ತು ಸಂಘಟನೆಗಳಿಗೆ ಮನವಿ ಮಾಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ AIಗೆ ಹೊಸ ಅಧ್ಯಾಯ – MCP ಏಕೀಕರಣದೊಂದಿಗೆ Zoho Zia Chat ಪರಿಚಯ : ವ್ಯವಹಾರ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಸಾಫ್ಟ್ವೇರ್ ಕಂಪನಿ Zoho ಹೊಸ Zia Chat AI ಇಂಟರ್ಫೇಸ್ ಅನ್ನು ಪರಿಚಯಿಸಿದೆ. ವಿವಿಧ ವ್ಯವಹಾರ ಅಪ್ಲಿಕೇಶನ್ಗಳ ನಡುವೆ ಪದೇಪದೇ ಬದಲಾಯಿಸದೆ, ಒಂದೇ ಸಂವಾದಾತ್ಮಕ ಇಂಟರ್ಫೇಸ್ ಮೂಲಕ ಮಾಹಿತಿ ಹುಡುಕುವುದು, ವ್ಯವಹಾರದ ಸಂದರ್ಭವನ್ನು ಅರ್ಥಮಾಡಿಕೊಳ್ಳುವುದು ಹಾಗೂ ಅಗತ್ಯ ಕಾರ್ಯಗಳನ್ನು ಕೈಗೊಳ್ಳುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಾಮಾನ್ಯವಾಗಿ ಸಂಸ್ಥೆಗಳಲ್ಲಿ ಮಾರಾಟ, ಮಾರ್ಕೆಟಿಂಗ್, ಗ್ರಾಹಕ ಸೇವೆ, ಮಾನವ ಸಂಪನ್ಮೂಲ ಹಾಗೂ ಹಣಕಾಸು ಸೇರಿದಂತೆ ವಿವಿಧ ಕಾರ್ಯಗಳಿಗೆ ಪ್ರತ್ಯೇಕ ಸಾಫ್ಟ್ವೇರ್ಗಳನ್ನು ಬಳಸಲಾಗುತ್ತದೆ. ಇದರಿಂದ ಉದ್ಯೋಗಿಗಳು ಒಂದು ಅಪ್ಲಿಕೇಶನ್ನಿಂದ ಮತ್ತೊಂದು ಅಪ್ಲಿಕೇಶನ್ಗೆ ತೆರಳಿ ಮಾಹಿತಿ ಹುಡುಕಬೇಕಾಗುತ್ತದೆ. ಈ ರೀತಿಯ ವಿಭಜಿತ ಕೆಲಸದ ಅನುಭವವನ್ನು ಕಡಿಮೆ ಮಾಡುವ ಉದ್ದೇಶದಿಂದ Zia Chat ಅನ್ನು ರೂಪಿಸಲಾಗಿದೆ ಎಂದು Zoho ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಜೆಪಿ ರಾಜ್ಯ ಉಸ್ತುವಾರಿಗಳ ಪುನಾರಚನೆ – ರಾಜ್ಯ ಉಸ್ತುವಾರಿಗಳ ನೇಮಕ : ಬಿಜೆಪಿಯಲ್ಲಿ ಮಹತ್ವದ ಸಂಘಟನಾ ಪುನಾರಚನೆ – ರಾಜ್ಯ ಉಸ್ತುವಾರಿಗಳ ಹೊಸ ಪಟ್ಟಿ ಪ್ರಕಟಗೊಂಡಿದೆ. ಭಾರತೀಯ ಜನತಾ ಪಕ್ಷದಲ್ಲಿ ಮಹತ್ವದ ಸಂಘಟನಾ ಬದಲಾವಣೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ವಿವಿಧ ರಾಜ್ಯಗಳ ಪಕ್ಷದ ಉಸ್ತುವಾರಿಗಳು ಹಾಗೂ ಸಹ-ಉಸ್ತುವಾರಿಗಳ ಹೊಸ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಹೊಸ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಉತ್ತರ ಕರ್ನಾಟಕದಲ್ಲಿ ಮೊಳಗಿದ ‘ಲವ್ ಟುವರ್ಡ್ಸ್ ಫ್ಯಾಮಿಲಿ’ ಚಿತ್ರದ ‘ಹೇ ನವಿಲೆ’ ಹಾಡು : ‘ಲವ್ ಟುವರ್ಡ್ಸ್ ಫ್ಯಾಮಿಲಿ’ ಸಿನಿಮಾದ ಎರಡನೇ ಗೀತೆ ‘ಹೇ ನವಿಲೆ’ ಇದೀಗ ಬಿಡುಗಡೆಯಾಗಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ಹೊಸ ಹಾಡನ್ನು ಅನಾವರಣಗೊಳಿಸಲಾಗಿದ್ದು, ಸಿನಿಮಾ ತಂಡ ಮತ್ತಷ್ಟು ಪ್ರಚಾರ ಕಾರ್ಯಗಳಿಗೆ ವೇಗ ನೀಡಿದೆ. ‘ಹೇ ನವಿಲೆ’ ಹಾಡು ಇತ್ತಿಚೆಗೆ ಮ್ಯೂಸಿಕ್ ಪ್ಲಾಟ್ಫಾರ್ಮ್ಗಳಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
TRAI ಹೊಸ ನಿಯಮ – ಮೊಬೈಲ್ ರೀಚಾರ್ಜ್ನಲ್ಲಿ ಮಹತ್ವದ ಬದಲಾವಣೆ : ಮೊಬೈಲ್ ಬಳಕೆದಾರರಿಗೆ ಸಂಬಂಧಿಸಿದಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಮಹತ್ವದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡೇಟಾ ಸೇವೆ ಅಗತ್ಯವಿಲ್ಲದೆ ಕೇವಲ ಕರೆ ಮತ್ತು SMS ಬಳಸುವ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸುವ ಉದ್ದೇಶದಿಂದ Telecom Consumer Protection (Thirteenth Amendment) Regulations, 2026 ಅನ್ನು TRAI ಬಿಡುಗಡೆ ಮಾಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ IAS ಅಧಿಕಾರಿಗಳ ದಿಢೀರ್ ವರ್ಗಾವಣೆ: ರ್ನಾಟಕ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, 6 ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನಿಯೋಜಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, HESCOM, GESCOM, ಹಟ್ಟಿ ಗೋಲ್ಡ್ ಮೈನ್ಸ್ ಹಾಗೂ ವಿವಿಧ ಜಿಲ್ಲಾ ಪಂಚಾಯಿತಿಗಳ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಆಯುಷ್ಮಾನ್ ಭಾರತ ಯೋಜನೆಗೆ 8 ವರ್ಷ : ಶದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಸೇವೆಗಳನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ 2018ರಲ್ಲಿ ಆರಂಭಿಸಲಾದ ಆಯುಷ್ಮಾನ್ ಭಾರತ–ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಇದೀಗ ಎಂಟನೇ ವರ್ಷಕ್ಕೆ ಕಾಲಿಟ್ಟಿದೆ. ಯೋಜನೆಯಡಿ ಸೆಪ್ಟೆಂಬರ್ 21, 2026ರ ವೇಳೆಗೆ 48.51 ಕೋಟಿಗೂ ಹೆಚ್ಚು ಜನರು ಆಯುಷ್ಮಾನ್ ಕಾರ್ಡ್ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತದ IMEC ಯೋಜನೆಗೆ ಟ್ರಂಪ್ ಬೆಂಬಲ: ಹೋರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಮತ್ತು ವಾಣಿಜ್ಯ ಹಡಗುಗಳ ಸಂಚಾರದ ಮೇಲಿನ ಆತಂಕದ ನಡುವೆಯೇ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ನಡೆದ ಸಭೆಗಳಲ್ಲಿ ಗಲ್ಫ್ ರಾಷ್ಟ್ರಗಳು ಹಾಗೂ ಜೋರ್ಡಾನ್ ಸೇರಿದಂತೆ ಅರಬ್ ಪ್ರತಿನಿಧಿಗಳೊಂದಿಗೆ ಈ ಕುರಿತು ಚರ್ಚೆ ನಡೆದಿದೆ. ಭಾರತ, ಕೊಲ್ಲಿ ಪ್ರದೇಶ ಮತ್ತು ಯುರೋಪ್ ನಡುವಿನ ವ್ಯಾಪಾರ ಸಂಪರ್ಕವನ್ನು ಬಲಪಡಿಸುವ ಉದ್ದೇಶದ IMEC ಯೋಜನೆಗೆ 2023ರ ನವದೆಹಲಿ G20 ಶೃಂಗಸಭೆಯಲ್ಲಿ ಚಾಲನೆ ನೀಡಲಾಗಿತ್ತು. ಯೋಜನೆಯಡಿ ಭಾರತದಿಂದ ಸಮುದ್ರ ಮಾರ್ಗದ ಮೂಲಕ ಕೊಲ್ಲಿ ಪ್ರದೇಶಕ್ಕೆ ಸರಕು ಸಾಗಣೆ, ಅಲ್ಲಿಂದ ರೈಲು ಮತ್ತು ಇತರ ಸಂಪರ್ಕ ವ್ಯವಸ್ಥೆಗಳ ಮೂಲಕ ಯುರೋಪ್ಗೆ ಸಾಗಿಸುವ ಬಹುಮಾದರಿ ಜಾಲವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರೈತರ ಸಂಕಷ್ಟ, ಬರ ಪರಿಹಾರ ಇಂದು ಸದನದಲ್ಲಿ ಪ್ರಮುಖ ಚರ್ಚೆ – ಅಧಿವೇಶನ ವಿಸ್ತರಣೆಗೆ ಬೇಡಿಕೆ? :ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನದ ಕೊನೆಯ ದಿನ ಬರ ಪರಿಸ್ಥಿತಿ, ಪರಿಹಾರ ಹಾಗೂ ರೈತರ ಸಂಕಷ್ಟದ ಕುರಿತು ಚರ್ಚೆ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅಧಿವೇಶನದ ಕೊನೆಯ ದಿನ ಬರ, ರೈತರ ಸಂಕಷ್ಟ ಮತ್ತು ಪರಿಹಾರ ಕ್ರಮಗಳ ಕುರಿತು ನಡೆಯಲಿರುವ ಚರ್ಚೆ ಹಾಗೂ ಸರ್ಕಾರದ ಉತ್ತರದ ಬಳಿಕ ಅಧಿವೇಶನ ವಿಸ್ತರಣೆ ಕುರಿತು ಯಾವುದೇ ನಿರ್ಧಾರ ಹೊರಬರುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್ಡೇಟ್ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
(ಮಾಹಿತಿ ಅಪ್ಡೇಟ್ ಆಗಲಿದೆ)






















