SK Home Ad
Home ಸುದ್ದಿ Samyukta Karnataka News Live: ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಡಾ. ಆನಂದ ಪಾಂಡುರಂಗಿ ನಿಧನ

Samyukta Karnataka News Live: ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಡಾ. ಆನಂದ ಪಾಂಡುರಂಗಿ ನಿಧನ

0
498

ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್ ಮತ್ತೆ ಲಭ್ಯ : ರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು ಹಾಗೂ ಸಾಂಸ್ಕೃತಿಕ ವೈಭವವನ್ನು ವಿಭಿನ್ನ ರೀತಿಯಲ್ಲಿ ಪರಿಚಯಿಸುವ ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್ ಮತ್ತೆ ಬಿಡುಗಡೆಯಾಗಲಿದೆ. ಕರ್ನಾಟಕ ಅಂಚೆ ವೃತ್ತವು ಈ ಕೋಡುಗೆ ಮತ್ತೆ ಬರಲಿದೆ ಎಂದು ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಆಯೋಗದ ವಿವಾದದ ನಡುವೆ ರಾಹುಲ್ ಗಾಂಧಿ ಹೊಸ ಆರೋಪ : ಭಾರತದಲ್ಲಿ ಚುನಾವಣೆಗಳ ಸಂದರ್ಭದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬುದು “ಶೇಕಡಾ 100ರಷ್ಟು ಖಚಿತ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ ಅಕ್ರಮ ಅಥವಾ ‘ವೋಟ್ ಚೋರಿ’ ಎಂಬುದು ಕೇವಲ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ವಿಷಯವಲ್ಲ; ಇದು ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲಿನ ದಾಳಿ ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

AI ಅಪಾಯಗಳ ಕುರಿತು UN ಭದ್ರತಾ ಮಂಡಳಿಗೆ ಎಚ್ಚರಿಕೆ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ಸುರಕ್ಷತೆ ಹಾಗೂ ಭವಿಷ್ಯದ ಅಪಾಯಗಳ ಕುರಿತು ವಿಶ್ವದ ಪ್ರಮುಖ AI ಕಂಪನಿಗಳ ಮುಖ್ಯಸ್ಥರು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ. AIಯ ಹೆಚ್ಚುತ್ತಿರುವ ಸಾಮರ್ಥ್ಯವನ್ನು ಸುರಕ್ಷಿತವಾಗಿ ನಿರ್ವಹಿಸಲು ದೇಶಗಳು ಪರಸ್ಪರ ಸಹಕಾರದೊಂದಿಗೆ ಜಾಗತಿಕ ನಿಯಮಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ಸುದ್ದಿಗೋಷ್ಠಿ : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಜೆ ನವದೆಹಲಿಯ ಇಂದಿರಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವುದು ಹಾಗೂ ಚುನಾವಣಾ ದತ್ತಾಂಶದಲ್ಲಿ ಬದಲಾವಣೆಗಳಾಗಿವೆ ಎಂಬ ಆರೋಪಗಳ ಕುರಿತು ಅವರು ಮಾತನಾಡುವ ನಿರೀಕ್ಷೆಯಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಡಿಕೆಶಿ ಆಗ್ರಹ : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆಗಾರಿಕೆ ವಹಿಸಿಕೊಂಡು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾವೇರಿ ನೀರು ಬಾಕಿ ವಿಚಾರದಲ್ಲಿ ಹೊಸ ತಿರುವು : ಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ವಿವಾದ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನಗಳನ್ನು ಪಾಲಿಸುವ ವಿಚಾರದಲ್ಲಿ ಕರ್ನಾಟಕದ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಳಿಯಾಳ ಬರಪರಿಹಾರಕ್ಕೆ ಮಹತ್ವದ ಹೆಜ್ಜೆ – ವೈಜ್ಞಾನಿಕ ಪರಿಶೀಲನೆಗೆ ಅರ್ಹತೆ : ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯಿಂದ ಹಳಿಯಾಳ ತಾಲೂಕಿನ ರೈತರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಳಿಯಾಳ ತಾಲೂಕು ಬರ ಪರಿಸ್ಥಿತಿಯ Ground Truthing (ಸ್ಥಳ ಪರಿಶೀಲನೆ)ಗೆ ಅರ್ಹತೆ ಪಡೆದಿದ್ದು, ಬೆಳೆ ಹಾನಿಯ ನೈಜ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮನಸ್ಸುಗಳ ವೈದ್ಯನ ನಿರ್ಗಮನ : ಉತ್ತರ ಕರ್ನಾಟಕ ಕಂಡ ಅಪರೂಪದ ಮಾನವೀಯ ವೈದ್ಯ ಪರಂಪರೆಯ ಅಂತ್ಯವಾದಂತಾಗಿದೆ. ವೈದ್ಯೋ ನಾರಾಯಣ ಹರಿ ಎಂಬ ಮಾತು ಎಷ್ಟು ಸತ್ಯ ಎಂಬ ಅನುಭವ ಸಾರಿದ ಮನಸ್ಸುಗಳ ವೈದ್ಯ, ಸಾವಿರಾರು ಕುಟುಂಬಗಳಿಗೆ ನೆಮ್ಮದಿ ನೀಡಿದ್ದ ಡಾ. ಆನಂದ ಪಾಂಡುರಂಗಿ ಇನ್ನಿಲ್ಲ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಳಿನದಿಯಲ್ಲಿ ವಿಸರ್ಜಿತ ಗಣಪನ ಮೂರ್ತಿಗಳ ರಾಶಿ : ದಾಂಡೇಲಿಯಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆದ ಗಣೇಶೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಮನೆ ಹಾಗೂ ಸಾರ್ವಜನಿಕ ಗಣಪನ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ ಭಕ್ತರು ಶ್ರದ್ಧಾಭಕ್ತಿಯಿಂದ ಕಾಳಿನದಿಯಲ್ಲಿ ವಿಸರ್ಜನೆ ನೆರವೇರಿಸುತ್ತಿದ್ದಾರೆ. ಆದರೆ, ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿಸರ್ಜಿತ ಗಣಪನ ಮೂರ್ತಿಗಳು ಸಂಪೂರ್ಣವಾಗಿ ಮುಳುಗದೆ ರಾಶಿಯಾಗಿ ಕಾಣಿಸುತ್ತಿವೆ. ದೊಡ್ಡ ಸಾರ್ವಜನಿಕ ಗಣಪನ ಮೂರ್ತಿಗಳು ನದಿಯಲ್ಲಿ ಅಡ್ಡಬಿದ್ದು, ದೀರ್ಘಕಾಲ ಅಲ್ಲಿಯೇ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರವಾಡದ ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ : ಕರ್ನಾಟಕದ ಹಿರಿಯ ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಹಾಗೂ ಅಂಕಣಕಾರ ಡಾ. ಆನಂದ ಪಾಂಡುರಂಗಿ ನಿಧನ ಹೊಂದಿದ್ದಾರೆ. ಧಾರವಾಡದಲ್ಲಿ ದೀರ್ಘಕಾಲ ಮನೋವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ. ಆನಂದ ಪಾಂಡುರಂಗಿ ಅವರು ವೈದ್ಯಕೀಯ ಸೇವೆಯ ಜತೆಗೆ ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಕ್ರಿಯರಾಗಿದ್ದರು. ವಿದ್ಯಾರ್ಥಿಗಳು, ಯುವಜನರು ಹಾಗೂ ಕುಟುಂಬಗಳಿಗೆ ಮಾರ್ಗದರ್ಶನ ನೀಡುವುದು, ವ್ಯಕ್ತಿತ್ವ ವಿಕಸನ ಮತ್ತು ಆತ್ಮವಿಶ್ವಾಸದ ಕುರಿತು ಉಪನ್ಯಾಸಗಳನ್ನು ನೀಡುವುದು ಅವರ ಸಾಮಾಜಿಕ ಚಟುವಟಿಕೆಗಳ ಪ್ರಮುಖ ಭಾಗವಾಗಿತ್ತು. ಅವರ ವೃತ್ತಿಪರ ಪರಿಚಯದಲ್ಲಿ ವಿದ್ಯಾರ್ಥಿ ಮಾರ್ಗದರ್ಶನ, ಪೋಷಕರ ಸಮಾಲೋಚನೆ, ಕಿಶೋರರ ಆರೈಕೆ ಮತ್ತು ವ್ಯಸನಮುಕ್ತಿ ಸೇವೆಗಳನ್ನೂ ಸಲ್ಲಿಸಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಮಾನ್ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ – ಭಾರತೀಯ ನಾವಿಕ ಸಾವು : ಒಮಾನ್‌ನ ಪೂರ್ವ ಕರಾವಳಿ ಸಮೀಪ ವಾಣಿಜ್ಯ ಹಡಗು MV Cape Dao ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ. ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಪೈಕಿ 19 ಮಂದಿಯನ್ನು ರಕ್ಷಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಹಡಗುಗಳು ಹಾಗೂ ನಾವಿಕರ ಮೇಲಿನ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಕಣ ಬರಹ | ಕಲ್ಯಾಣ-ಕರಾವಳಿ ಬದುಕಿಗೆ ಬೇಕಿಲ್ಲ ಭಾವನೆಯ ಆಟ! : ಸಂಯುಕ್ತ ಕರ್ನಾಟಕ ಕಾರ್ಯನಿರ್ವಾಹಕ ಹಾಗೂ ಸಂಪಾದಕರಾದ ಮೋಹನ ಹೆಗಡೆ ಅವರ ಅಂಕಣ ಗುರುವಾರ ದಿನಪತ್ರಿಕೆಯಲ್ಲಿ ಪ್ರಕಟವಾದ ಲೇಖನದಲ್ಲಿ ಕಲ್ಯಾಣ ಕರ್ನಾಟಕದಿಂದ ಕರಾವಳಿ ಕರ್ನಾಟಕದವರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಂಡ ಪ್ರವಾಸ ಕುರಿತಂತೆ ಹಾಗೂ ಜನರ ಭಾವನೆಗಳಿಗೆ ಸ್ಪಂದಿಸುವ ಘೋಷಣೆಗಳ ಜೊತೆಗೆ ಶಿಕ್ಷಕರ ನೇಮಕಾತಿ, 371(ಜೆ), ಮೂಲಸೌಕರ್ಯ, ಭೂಮಿ-ಪುನರ್ವಸತಿ, CRZ, ಅರಣ್ಯ ಕಾಯ್ದೆ ಹಾಗೂ ಕಸ್ತೂರಿರಂಗನ್ ವರದಿಯಂತಹ ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕೆಂದು ಲೇಖಕರು ಪ್ರಶ್ನಿಸುತ್ತಾರೆ. ಜನರ ಭಾವನೆಗಳನ್ನು ಗೌರವಿಸುವ ರಾಜಕಾರಣದ ಜೊತೆಗೆ ಅವರ ನೈಜ ಬದುಕಿನ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆಯೇ? ಎಂಬುದು. ಕಲ್ಯಾಣ ಕರ್ನಾಟಕ ಮತ್ತು ಕರಾವಳಿ ಭಾಗದ ಜನರಿಗೆ ಘೋಷಣೆಗಳಿಗಿಂತ ಶಿಕ್ಷಣ, ಉದ್ಯೋಗ, ನೀರು, ರಸ್ತೆ, ಭೂಮಿ, ಪುನರ್ವಸತಿ ಮತ್ತು ಮೂಲಭೂತ ಸೌಲಭ್ಯಗಳ ಖಚಿತತೆ ಅಗತ್ಯ ಎಂದು ಈ ಲೇಖನದಲಿ ಹೇಳಲಾಗಿದ್ದು. “ಭಾವನೆಗಳ ರಾಜಕಾರಣ”ಕ್ಕಿಂತ “ಬದುಕಿನ ರಾಜಕಾರಣ”ಕ್ಕೆ ಆದ್ಯತೆ ನೀಡಬೇಕು, ಘೋಷಿತ ಯೋಜನೆಗಳು ಕಾರ್ಯರೂಪಕ್ಕೆ ಬಂದು ಜನರ ಬದುಕಿನಲ್ಲಿ ಬದಲಾವಣೆ ತರಬೇಕು ಎಂಬ ಆಶಯವೇ ಅಂಕಣದ ಮುಖ್ಯ ಸಂದೇಶ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)