SK Home Ad
Home ಸುದ್ದಿ ರಾಜ್ಯ ಸೌಜನ್ಯ ಪ್ರಕರಣದ ಮರು ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಎನ್. ಶಶಿಕುಮಾರ್

ಸೌಜನ್ಯ ಪ್ರಕರಣದ ಮರು ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಎನ್. ಶಶಿಕುಮಾರ್

0
16

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಮರು ತನಿಖೆ ನಡೆಯಲಿದ್ದು, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊಸ ಎಸ್‌ಐಟಿಯಲ್ಲಿ ಸೇರ್ಪಡೆಗೊಳಿಸದಂತೆ ಸೂಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಲಭ್ಯವಿರುವ ಸಾಕ್ಷ್ಯಗಳು, ವೈಜ್ಞಾನಿಕ ದಾಖಲೆಗಳು ಹಾಗೂ ಇತರ ಮಹತ್ವದ ಅಂಶಗಳನ್ನು ಆಧರಿಸಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ತನಿಖೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಸೌಜನ್ಯ ಪ್ರಕರಣದಲ್ಲಿ ಈ ಹಿಂದೆ ಸಂತೋಷ್ ರಾವ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ ಸಿಬಿಐ ವಿಶೇಷ ನ್ಯಾಯಾಲಯವು 2023ರಲ್ಲಿ ಅವರನ್ನು ಖುಲಾಸೆಗೊಳಿಸಿತ್ತು. ಬಳಿಕ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಕುಟುಂಬದವರು ನ್ಯಾಯಾಲಯದ ಮೊರೆ ಹೋಗಿದ್ದರು.

ಸುಪ್ರೀಂಕೋರ್ಟ್‌ನ ಹೊಸ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ತನಿಖೆ ಆರಂಭವಾಗಲಿದ್ದು, ಎಸ್‌ಐಟಿ ಕೈಗೊಳ್ಳುವ ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ.