‘ಮೇಕ್ ಇನ್ ಇಂಡಿಯಾ’ದ ಪಯಣಕ್ಕೆ 12 ವರ್ಷ : ದೇಶವನ್ನು ಜಾಗತಿಕ ಉತ್ಪಾದನಾ, ವಿನ್ಯಾಸ ಮತ್ತು ನವೋದ್ಯಮ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ 2014ರ ಸೆಪ್ಟೆಂಬರ್ 25ರಂದು ಆರಂಭಿಸಲಾದ ‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಇಂದು 12 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಔಷಧ, ಉಕ್ಕು, ರೈಲ್ವೆ ಮತ್ತು ರಕ್ಷಣಾ ಉತ್ಪಾದನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶೀಯ ಉತ್ಪಾದನಾ ಸಾಮರ್ಥ್ಯ ವಿಸ್ತರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಕರ್ನಾಟಕ ಪರ್ವ-2026 : ಕಲೆ, ಸಂಸ್ಕೃತಿ, ಕರಕುಶಲತೆ ಹಾಗೂ ಸ್ಥಳೀಯ ಉದ್ಯಮಶೀಲತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಕರ್ನಾಟಕ ಪರ್ವ-2026’ ಉತ್ಸವ ಸೆಪ್ಟೆಂಬರ್ 26ರಿಂದ 30ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿದೆ. ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಐದು ದಿನಗಳ ಉತ್ಸವವನ್ನು ಸೆಪ್ಟೆಂಬರ್ 26ರಂದು ಉದ್ಘಾಟನೆಯಾಗಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರದಲ್ಲಿ ಶಂಕಿತ ಉಗ್ರರ ಬಂಧನ : ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಂಕಿತ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಹುಬ್ಬಳ್ಳಿ ಗಣೇಶ ವಿಸರ್ಜನೆಗೆ ಪೊಲೀಸರ ಮಾರ್ಗಸೂಚಿ : ಇಂದು ( ಸೆ.25 ರಂದು) ಸಂಜೆ 11 ದಿನದ ಸಾರ್ವಜನಿಕ ಗಣೇಶಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತಾಲಯವು ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟಿಸಿದ್ದು ಸಂಚಾರ ಮತ್ತು ವಿಸರ್ಜನೆ ವೇಳೆ ಪೊಲೀಸರ ಸೂಚನೆ ಪಾಲಿಸಬೇಕು ಎಂದು ಆಯುಕ್ತಾಲಯದ ಪ್ರಕಟಣೆ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಶಾರ್ಜಾದಲ್ಲಿ ಕೊಲೆಗೀಡಾದ ಅಲ್ವಿನ್ ಕುಂದರ್ ಶವ ಇಂದು ತಾಯ್ನಾಡಿಗೆ : ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಗೀಡಾಗಿರುವ ಇಲ್ಲಿನ ಕುಂದಾಪುರದ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಶವ ಶಾರ್ಜಾದಿಂದ ಸೆ.25 ರಂದು ವಿಮಾನದ ಮೂಲಕ ಹುಟ್ಟೂರಿಗೆ ಬರಲಿದೆ. ಗುರುವಾರ ರಾತ್ರಿ 11 ಗಂಟೆಗೆ ಶಾರ್ಜಾದಿಂದ ಪ್ರಕಾಶ್ ಅವರ ಸಂಬಂಧಿಕರು ಹಾಗೂ ಕಂಪೆನಿಯವರು ವಿಮಾನದಲ್ಲಿ ಪಾರ್ಥಿವ ಶರೀರದೊಂದಿಗೆ ಹೊರಟಿದ್ದು, ಶುಕ್ರವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
(ಮಾಹಿತಿ ಅಪ್ಡೇಟ್ ಆಗಲಿದೆ)






















