ಹುಬ್ಬಳ್ಳಿ: ಗಾಂಧಿ ಜಯಂತಿ ಹಬ್ಬದ ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) 120 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ನಿರ್ಧರಿಸಿದೆ.
ಅ.1 ಗುರುವಾರ, ಅ. 2 ಶುಕ್ರವಾರ ಗಾಂಧಿ ಜಯಂತಿ, ಅ. 3 ಶನಿವಾರ ಮತ್ತು ಅ. 4 ಭಾನುವಾರ ಸತತ ರಜೆ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೆಲಸ ಮಾಡುವ ಜನರು ತಮ್ಮ ಸ್ವಂತ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಅದರಲ್ಲೂ ಬೆಂಗಳೂರಿನಿಂದ ಉತ್ತರ ಕರ್ನಾಟಕದ ವಿವಿಧ ಸ್ಥಳಗಳಿಗೆ ಅ. 1 ಮತ್ತು 2ರಂದು ಹೆಚ್ಚಿನ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.
ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಸದುಪಯೋಗ ಪಡಿಸಿಕೊಂಡು ಸುರಕ್ಷಿತ ಮತ್ತು ಸುಖಕರ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್‌ಗಳಲ್ಲೇ ಪ್ರಯಾಣಿಸಬೇಕು ಎಂದು ವಾಕರಸಾ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



















