SK Home Ad
Home ಕ್ರೀಡೆ ರೋಹಿತ್–ಕೊಹ್ಲಿ ಕಂಬ್ಯಾಕ್: ವಿಂಡೀಸ್ ವಿರುದ್ಧ ಭಾರತಕ್ಕೆ ಟಾಸ್ ಗೆಲುವು

ರೋಹಿತ್–ಕೊಹ್ಲಿ ಕಂಬ್ಯಾಕ್: ವಿಂಡೀಸ್ ವಿರುದ್ಧ ಭಾರತಕ್ಕೆ ಟಾಸ್ ಗೆಲುವು

0
53

ತಿರುವನಂತಪುರಂ: ವೆಸ್ಟ್‌ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ, ಭಾರತ ತಂಡದ ನಾಯಕ ಶುಭಮನ್ ಗಿಲ್, ವೆಸ್ಟ್‌ಇಂಡೀಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ನೀಡಿದ್ದಾರೆ.

2027ರ ಏಕದಿನ ವಿಶ್ವಕಪ್‌ ತಯಾರಿಗೆ ಮಹತ್ವದ ಸರಣಿಯಾಗಿರುವ ಹಿನ್ನೆಲೆಯಲ್ಲಿ ಈ ಪಂದ್ಯ ಕುತೂಹಲ ಮೂಡಿಸಿದೆ. ನಾಯಕ ಶುಭಮನ್ ಗಿಲ್ ನೇತೃತ್ವದ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೆ ಏಕದಿನ ಕ್ರಿಕೆಟ್‌ಗೆ ಮರಳಿದ್ದಾರೆ. ಇವರ ಅನುಭವದ ಜತೆಗೆ ರುತುರಾಜ್ ಗಾಯಕ್ವಾಡ್, ಕೆ.ಎಲ್. ರಾಹುಲ್, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ಈ ಪಂದ್ಯದಲ್ಲಿ ನಮನ್ ಧೀರ್ ಭಾರತ ಪರ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಭಾರತ ತಂಡದಲ್ಲಿ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ.ಎಲ್. ರಾಹುಲ್, ನಮನ್ ಧೀರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಗುರ್ನೂರ್ ಬ್ರಾರ್, ಕುಲದೀಪ್ ಯಾದವ್ ಹಾಗೂ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ.

ವೆಸ್ಟ್‌ಇಂಡೀಸ್ ತಂಡವನ್ನು ಶೈ ಹೋಪ್ ಮುನ್ನಡೆಸುತ್ತಿದ್ದು, ಜಾನ್ ಕ್ಯಾಂಪ್ಬೆಲ್, ಜಸ್ಟಿನ್ ಗ್ರೀವ್ಸ್, ಕೀಸಿ ಕಾರ್ಟಿ, ಅಮೀರ್ ಜಾಂಗೂ, ಜ್ಯುವೆಲ್ ಆ್ಯಂಡ್ರೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಗುಡಾಕೇಶ್ ಮೋಟಿ, ಅಲ್ಜಾರಿ ಜೋಸೆಫ್ ಹಾಗೂ ಜೇಡನ್ ಸೀಲ್ಸ್ ತಂಡದಲ್ಲಿದ್ದಾರೆ.

ಭಾರತ ಮತ್ತು ವೆಸ್ಟ್‌ಇಂಡೀಸ್ ನಡುವಿನ ಏಕದಿನ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳಿದ್ದು, ಎರಡನೇ ಪಂದ್ಯ ಸೆ. 30ರಂದು ಗುವಾಹಟಿಯಲ್ಲಿ ಹಾಗೂ ಮೂರನೇ ಪಂದ್ಯ ಅ. 3ರಂದು ನ್ಯೂ ಚಂಡೀಗಢದಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ.ಎಲ್. ರಾಹುಲ್ (ವಿಕೆಟ್‌ಕೀಪರ್), ನಮನ್ ಧೀರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಗುರ್ನೂರ್ ಬ್ರಾರ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ.