ತಿರುವನಂತಪುರಂ: ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಬಳಿಕ 15 ಸಾವಿರ ರನ್ ಗಳಿಸಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾದರು.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಲ್ಜಾರಿ ಜೋಸೆಫ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಮೈಲುಗಲ್ಲನ್ನು ತಲುಪಿದರು.
15 ಸಾವಿರ ಏಕದಿನ ರನ್ ಸಾಧನೆ ಮಾಡಿದ ಮೊದಲ ಆಟಗಾರ ಸಚಿನ್ ತೆಂಡೂಲ್ಕರ್. ಸಚಿನ್ 377 ಇನಿಂಗ್ಸ್‌ಗಳಲ್ಲಿ 15 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು. ವಿಶೇಷವೆಂದರೆ ವಿರಾಟ್ ಕೊಹ್ಲಿ ಕೇವಲ 303 ಇನಿಂಗ್ಸ್‌ಗಳಲ್ಲಿ 15 ಸಾವಿರ ರನ್ ಗಳಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ.
ಸಚಿನ್ ತೆಂಡೂಲ್ಕರ್ 18,426 ರನ್ ಬಾರಿಸುವ ಮೂಲಕ ಅತಿ ಹೆಚ್ಚು ರನ್‌ಗಳಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್‌ನಲ್ಲಿ 55 ಶತಕ ಮತ್ತು 80 ಅರ್ಧಶತಕಗಳ ಮೂಲಕ 15 ಸಾವಿರ ರನ್ ಗಡಿ ದಾಟಿದ್ದಾರೆ.






















