IIT ಧಾರವಾಡದಲ್ಲಿ ಸಂಸ್ಕೃತ ಕಲಿಯಲು ಅವಕಾಶ : ಸಂಸ್ಕೃತ ಭಾಷೆ ಹಾಗೂ ಸಾಹಿತ್ಯವನ್ನು ಕಲಿಯಲು ಆಸಕ್ತರಿಗೆ ಮಹತ್ವದ ಅವಕಾಶ ದೊರೆತಿದ್ದು, ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಐಐಟಿ ಧಾರವಾಡದ ಜಂಟಿ ಸಹಯೋಗದಲ್ಲಿ ನಡೆಸಲಾಗುವ ಸಂಸ್ಕೃತ ಪ್ರಮಾಣಪತ್ರ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಗೆ 2026–27ನೇ ಶೈಕ್ಷಣಿಕ ಅವಧಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಫ್ಘಾನಿಸ್ತಾನ ವಿರುದ್ಧ ಪಂದ್ಯವಿಲ್ಲದೆ ಭಾರತಕ್ಕೆ ಸೆಮಿಫೈನಲ್ ಟಿಕೆಟ್ : ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಭಾರತ ಯಾವುದೇ ಎಸೆತ ಆಡದೆ ಸೆಮಿಫೈನಲ್‌ಗೆ ಪ್ರವೇಶಿಸಿದೆ. ನಿಸ್ಸಿನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಿರಂತರ ಮಳೆ ಹಾಗೂ ಮೈದಾನ ತೇವವಾಗಿದ್ದ ಕಾರಣ ಪಂದ್ಯ ಆರಂಭಿಸಲು ಸಾಧ್ಯವಾಗಲಿಲ್ಲ. ಟಾಸ್ ಕೂಡ ನಡೆಯದೆ ಭಾರತ ನಿಯಮಾನುಸಾರ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ನಕಲಿ ಔಷಧ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ ಬಂಧನ : ರಾಮನಗರದ ಬಿಡದಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಪತ್ತೆಯಾಗಿರುವ ನಕಲಿ ಔಷಧ ಜಾಲದ ತನಿಖೆ ಮುಂದುವರಿದಿರುವ ನಡುವೆಯೇ, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನೆಂದು ಗುರುತಿಸಲಾಗಿರುವ ಆರ್. ಪ್ರಶಾಂತ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಬಂಧಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದಿನಿಂದ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ : ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಕಾಲ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿ ಇಂದಿನಿಂದ ಬ್ಯಾಂಕ್ ಶಾಖೆಗಳ ಸಾಮಾನ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ತಿಳಿಸಲಾಗಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಸೆಪ್ಟೆಂಬರ್ 28ರಿಂದ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಐದು ದಿನಗಳ ಕೆಲಸದ ವಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದವು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
- IIT ಧಾರವಾಡದಲ್ಲಿ ಸಂಸ್ಕೃತ ಪ್ರಮಾಣಪತ್ರ, ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭ
- IND vs AFG : ಮೈದಾನಕ್ಕಿಳಿಯದೆ ಭಾರತ ಸೆಮಿಫೈನಲ್‌ಗೆ
- ನಕಲಿ ಔಷಧ ಪ್ರಕರಣ: ವಿದೇಶದಿಂದ ಮರಳಿದ ಆರೋಪಿ ಪ್ರಶಾಂತ್ ಬಂಧನ
- ಬ್ಯಾಂಕ್ ಗ್ರಾಹಕರಿಗೆ ರಿಲೀಫ್: 3 ದಿನಗಳ ಮುಷ್ಕರ ಮುಂದೂಡಿಕೆ, ಸೇವೆಗಳಲ್ಲಿ ವ್ಯತ್ಯಯ ಇಲ್ಲ
- Samyukta Karnataka News Live: ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ಮುಷ್ಕರ ಮುಂದೂಡಿಕೆ, ಸೇವೆಗಳು ಎಂದಿನಂತೆ
(ಮಾಹಿತಿ ಅಪ್ಡೇಟ್ ಆಗಲಿದೆ)






















