ದಾವಣಗೆರೆ: ಬೆಂಗಳೂರಿನಿಂದ ಶಿಕಾರಿಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವ ದಂಪತಿ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜಿಲ್ಲಾ ಒಕ್ಕಲಿಗ ಸಮಾಜದ ಮುಖಂಡರು ಮಾನವೀಯತೆ ಮೆರೆದ ಘಟನೆ ಮಲ್ಲಶೆಟ್ಟಿಹಳ್ಳಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಜಿಲ್ಲಾ ಒಕ್ಕಲಿಗ ಸಮಾಜದ ಮುಖಂಡ ಎಸ್.ಟಿ. ಯೋಗೇಶ್ವರ (ಯಗ್ಗಪ್ಪ), ಎಂ.ಜೆ. ನಾಗರಾಜ, ಪುಟ್ಟಸ್ವಾಮಿ ಹಾಗೂ ರಾಜಣ್ಣ ಅವರು ಬೆಂಗಳೂರಿನಿಂದ ಕಾರಿನಲ್ಲಿ ದಾವಣಗೆರೆಗೆ ಮರಳುತ್ತಿದ್ದಾಗ ರಾತ್ರಿ 1.41ರ ಸುಮಾರಿಗೆ ಈ ಘಟನೆ ಗಮನಿಸಿದ್ದಾರೆ. ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳಾದ ಶಿಕಾರಿಪುರದ ಲಿಂಗರಾಜು ಹಾಗೂ ಭಾವನಾ ಅವರನ್ನು ಆಂಬ್ಯುಲೆನ್ಸ್ ಮೂಲಕ ದಾವಣಗೆರೆಯ ಆರೈಕೆ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಇಬ್ಬರಿಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಬಳಿಕ ಯೋಗೇಶ್ವರ ಸೇರಿದಂತೆ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಕುಟುಂಬದವರಿಗೆ ಧೈರ್ಯ ತುಂಬಿದರು.





















