SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಪಂಚಮಸಾಲಿ ಮಠದ ಸುತ್ತ ಸೆ. 30ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಪಂಚಮಸಾಲಿ ಮಠದ ಸುತ್ತ ಸೆ. 30ರವರೆಗೆ ನಿಷೇಧಾಜ್ಞೆ ವಿಸ್ತರಣೆ

0
16

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವೆ ಉಂಟಾಗಿರುವ ಜಟಾಪಟಿಯ ಹಿನ್ನೆಲೆಯಲ್ಲಿ ಶ್ರೀಮಠದ ಸುತ್ತ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಸೆ. 30ರವರೆಗೆ ವಿಸ್ತರಿಸಿ ಹರಿಹರ ತಹಸೀಲ್ದಾರ್‌ ಸಂತೋಷಕುಮಾರ ಆದೇಶ ಹೊರಡಿಸಿದ್ದಾರೆ.

ಶ್ರೀಮಠದಲ್ಲಿ ಹಿರಿಯ ಗುರುಗಳಾಗಿದ್ದ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಗಳ 89ನೇ ಜಯಂತಿ ಕಾರ್ಯಕ್ರಮ ನಡೆಯಿತು. ಶ್ರೀ ವಚನಾನಂದ ಸ್ವಾಮೀಜಿ, ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ರಾಜಕುಮಾರ, ‘ಲೆಕ್ಕ ಕೊಡಿ’ ಚಳವಳಿ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀಮಠದ ಸುತ್ತ ಜು. 1ರಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವಿನ ವಿವಾದದ ಹಿನ್ನೆಲೆಯಲ್ಲಿ ಇದೀಗ ಸೆ.30ರವರೆಗೆ ಮುಂದುವರಿಸಲಾಗಿದೆ.

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಗಳ 89ನೇ ಜಯಂತಿಯನ್ನು ಶ್ರೀ ವಚನಾನಂದ ಸ್ವಾಮೀಜಿ, ಸಮಾಜದ ಮುಖಂಡರು ಹಾಗೂ ಸಮಾಜ ಬಾಂಧವರು ಆಚರಿಸಿದರು. ಕಾರ್ಯಕ್ರಮದಲ್ಲಿ ಭಕ್ತರು ಕೂಡ ಪಾಲ್ಗೊಂಡಿದ್ದರು.