SK Home Ad
Home ನಮ್ಮ ಜಿಲ್ಲೆ ಯಾದಗಿರಿ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನ: ಅಜ್ಜನ ವಿರುದ್ಧ ಪೋಕ್ಸೋ ಕೇಸ್

ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನ: ಅಜ್ಜನ ವಿರುದ್ಧ ಪೋಕ್ಸೋ ಕೇಸ್

0
66
ಸಾಂದರ್ಭಿಕ Ai ಚಿತ್ರ

ಕೆಂಭಾವಿ (ಯಾದಗಿರಿ) : ಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಆಘಾತಕಾರಿ ಘಟನೆ ಸುರಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಸೆ.23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಚೂರಿ ತೋರಿಸಿ ಬೆದರಿಸಿದ್ದಲ್ಲದೆ, ಬಾಲಕಿಯ ಬಟ್ಟೆ ಬಿಚ್ಚಿಸಿ, ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ.

ಘಟನೆ ಗಮನಿಸಿದ ವ್ಯಕ್ತಿಯೊಬ್ಬರು ಕೂಡಲೇ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯ ತಾಯಿ ಬೆಂಗಳೂರಿಗೆ ತೆರಳಿದ್ದ ವೇಳೆ, ಬಾಲಕಿಯನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಕೃತ್ಯಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಬಾಲಕಿಯ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದು ಪತ್ತೆಯಾಗಿದೆ.

ವಿಷಯ ತಿಳಿದ ಬಳಿಕ ಬಾಲಕಿಯನ್ನು ಚಿಕಿತ್ಸೆ ಹಾಗೂ ರಕ್ಷಣೆಯ ಹಿನ್ನೆಲೆಯಲ್ಲಿ ಬಾಲಮಂದಿರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ 115(2), 109(1) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.