ಚಿತ್ರದುರ್ಗ: ಚಿತ್ರದುರ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಣಿವೆ ಬಳಿ KSRTC ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ KSRTC ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬಸ್‌ನಲ್ಲಿದ್ದ ನಾಲ್ಕಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















