SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬಿಸಿಯೂಟ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

0
28

ದಾವಣಗೆರೆ: ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ 10ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಗುರುವಾರ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ನಿಟ್ಟುವಳ್ಳಿ ಶ್ರೀರಾಮ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ಬಿಸಿಯೂಟಕ್ಕೆಂದು ಉಪ್ಪಿಟ್ಟು ಮಾಡಲಾಗಿತ್ತು. ಉಪ್ಪಿಟ್ಟು ತಿಂದ ನಂತರ ಸುಮಾರು 10 ಮಕ್ಕಳಲ್ಲಿ ಹೊಟ್ಟೆನೋವು ಕಾಣಿಸಿಕೊಳ್ಳುವ ಜೊತೆಗೆ ವಾಂತಿಯಾಗಿದೆ.

ತಕ್ಷಣ ಎಚ್ಚೆತ್ತ ಶಾಲಾ ಶಿಕ್ಷಕರು ಮಕ್ಕಳನ್ನು ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಆತಂಕಕ್ಕೆ ಒಳಗಾಗಿದ್ದು, ಶಾಲೆಯ ಬಳಿ ಜಮಾಯಿಸಿ ಬಿಸಿಯೂಟ ತಯಾಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.