SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

0
31

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದ ಚೇತನ್ (26) ಎಂದು ಗುರುತಿಸಲಾಗಿದೆ.

ಫಟನೆ ವಿವರ: ಚೇತನ್ ಸೇರಿದಂತೆ ಏಳು ಮಂದಿ ಸ್ನೇಹಿತರು ಕಳೆದ ರಾತ್ರಿ ಶಿಕಾರಿಗೆ ತೆರಳಿದ್ದರು. ಕತ್ತಲಿನಲ್ಲಿ ಶಿಕಾರಿ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಚೇತನ್‌ಗೆ ತಗುಲಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.
ಗಾಯಗೊಂಡ ಚೇತನ್ ಅವರನ್ನು ಜೊತೆಗಿದ್ದ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆ ಬಳಿಕ ಆಸ್ಪತ್ರೆಗೆ ಚೇತನ್ ಅವರನ್ನು ಕರೆತಂದಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿಕಾರಿಗೆ ತೆರಳಿದ್ದ ಏಳು ಮಂದಿಯಲ್ಲಿ ಮೂವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಂಡು ಹಾರಿದ ರೀತಿಯೇನು, ಶಿಕಾರಿಗೆ ಬಳಸಿದ್ದ ಆಯುಧ ಯಾರದ್ದು ಹಾಗೂ ಘಟನೆಯ ಸಂದರ್ಭದಲ್ಲಿ ಯಾರು ಗುಂಡು ಹಾರಿಸಿದರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.