ಬಳ್ಳಾರಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form-7 ಬಳಕೆಗೆ ಸಂಬಂಧಿಸಿದ ವಿವಾದ ಬಳ್ಳಾರಿಯಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮುಖಂಡರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಯಲ್ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, Form-7 ಅಡಿಯಲ್ಲಿ ಮತದಾರರ ಹೆಸರುಗಳ ಕುರಿತು ಆಕ್ಷೇಪಣೆ ಅಥವಾ ಪರಿಶೀಲನೆಗೆ ಮನವಿ ಸಲ್ಲಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವೇ ಆಗಿದ್ದು, ಯಾವುದೇ ಮತದಾರರ ಹೆಸರನ್ನು ಅಕ್ರಮವಾಗಿ ತೆಗೆದುಹಾಕುವಂತೆ ತಾವು ಶಿಫಾರಸು ಮಾಡಿಲ್ಲ ಎಂದು ವಾದಿಸಿದರು. ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಅವರು ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಅವರೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿದರು.
ಬಿಜೆಪಿ ಮುಖಂಡರ ಪ್ರಕಾರ, 7,561 ಮತದಾರರ ಅರ್ಹತೆಯನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಈ ಕ್ರಮವನ್ನು ಕಾಂಗ್ರೆಸ್ ಮುಖಂಡರು ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ BLA-1 ಮೋತ್ಕರ ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ವಿವಾದ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಪ್ರತಿಭಟನಾಕಾರರು ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ಹಾಗೂ ನೂಕಾಟ–ತಳ್ಳಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ರಾಯಲ್ ವೃತ್ತದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಎಸ್‌ಐಆರ್ ಪ್ರಕ್ರಿಯೆಯಡಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 7,561 ಮತದಾರರ ಹೆಸರುಗಳ ಪರಿಶೀಲನೆಗೆ ಸಂಬಂಧಿಸಿದಂತೆ ಬಿಜೆಪಿ ಬಿಎಲ್‌ಎ–1 ಹಾಗೂ ಕೆಲ ಪಾಲಿಕೆ ಅಧಿಕಾರಿಗಳ ವಿರುದ್ಧ ದೂರು–ಪ್ರತಿದೂರುಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ಕಾನೂನು ದುರ್ಬಳಕೆಯ ಆರೋಪ ಮಾಡುತ್ತಿದ್ದಾರೆ.
- ಸೂರ್ಯವಂಶಿಗೆ ಅವಕಾಶ ಸಿಗದಿದ್ದಕ್ಕೆ ಗಂಭೀರ್ ನೇರ ಮಾತು: ಸೋಶಿಯಲ್ ಮೀಡಿಯಾ ಕೂಗಿಗೆ ಮಣಿಯಲ್ಲ ಎಂದ ಕೋಚ್!
- SIR ಪ್ರಕರಣ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್
- ಬಳ್ಳಾರಿಯಲ್ಲಿ SIR ಕಿಚ್ಚು: Form-7 FIR ಖಂಡಿಸಿ ಬಿಜೆಪಿ ಪ್ರತಿಭಟನೆ, ಮುಖಂಡರು ವಶಕ್ಕೆ
- ಸ್ವದೇಶಿ AI ಚಿಪ್ ಸಾಮರ್ಥ್ಯಕ್ಕೆ ಬಲ: ಬೆಂಗಳೂರಿನ ಸಂಸ್ಥೆಗೆ ₹130 ಕೋಟಿ RDI ನೆರವು
- ಕರ್ನಾಟಕದ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಬಿಎಸ್ವೈ ಘೋಷಣೆ




















