SK Home Ad
Home ಸುದ್ದಿ ರಾಜ್ಯ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅರೆಸ್ಟ್

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅರೆಸ್ಟ್

0
98

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಕೆಪಿಎಸ್‌ಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್‌ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಮಹತ್ವದ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಇ.ಡಿ, ಪ್ರಕರಣದಲ್ಲಿ ಹಣಕಾಸು ವ್ಯವಹಾರಗಳು ಹಾಗೂ ಅಕ್ರಮದ ಸಾಧ್ಯತೆಗಳ ಬಗ್ಗೆಯೂ ತನಿಖೆ ಮುಂದುವರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೂಡ ಶಿವಶಂಕರಪ್ಪ ಸಾಹುಕಾರ್‌ ಅವರ ಮನೆ ಮೇಲೆ ಇ.ಡಿ ದಾಳಿ ನಡೆಸಿತ್ತು.

ಎರಡನೇ ಬಾರಿ ನಡೆದ ದಾಳಿ ಬೆನ್ನಲ್ಲೇ ಇದೀಗ ಅವರ ಬಂಧನವಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.