ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಮಂಗಳವಾರ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮುಂದೆ ಸಾಗುತ್ತಿದ್ದ ಲಾರಿ ಏಕಾಏಕಿ ಎಡಕ್ಕೆ ತಿರುಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ (21) ಅವರನ್ನು ಹಿರಿಯೂರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನೀರಿನ ಮಿತಬಳಕೆ ಮಾಡಿ, ಮುಂದಿನ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ
- ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ: ಟಾಸ್ ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ
- ಐಪಿಎಲ್ ಗೂ ಮುನ್ನ ಆರ್ ಸಿಬಿಗೆ ಗುಡ್ ನ್ಯೂಸ್; ತಂಡಕ್ಕೆ ಮರಳಲು ಜೋಶ್ ಹೇಝಲ್ ವುಡ್ ಗ್ರೀನ್ ಸಿಗ್ನಲ್
- ಆ ಮಾತನ್ನು 60ನೇ ವಯಸ್ಸಿನಲ್ಲೇ ಹೇಳಿದ್ದೆ: ಸಾಣೇಹಳ್ಳಿ ಮಠದ ಭವಿಷ್ಯದ ಬಗ್ಗೆ ಶ್ರೀಗಳ ಸುಳಿವು
- ಬಿಗ್ ಬಾಸ್ 13: ಜಗದೀಶ್ಗೆ ‘ಮುಸುರೆ ತಿಕ್ಕುವವನು’ ಎಂದ ಮಂಜ ಹಾಗೂ ಗಾನವಿಗೆ ಕಿಚ್ಚ ಸುದೀಪ್ ಖಡಕ್ ಕ್ಲಾಸ್!




















