SK Home Ad
Home ಸುದ್ದಿ ರಾಜ್ಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಐ ಅಟೆಂಡೆನ್ಸ್ ಕ್ಯಾಮೆರಾ

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಐ ಅಟೆಂಡೆನ್ಸ್ ಕ್ಯಾಮೆರಾ

0
34

ತುಮಕೂರು: ಸಾರ್ವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಅಧಿಕಾರಿ ಹಾಗೂ ಸಿಬ್ಬಂದಿಯ ಹಾಜರಾತಿ ಮೇಲೆ ನಿಗಾವಹಿಸುವ ಉದ್ದೇಶದಿಂದ ಎಐ ಅಟೆಂಡೆನ್ಸ್ ಕ್ಯಾಮೆರಾಗಳನ್ನು ಅಳವಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಸೇರಿದಂತೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುವುದು. ಇದರಿಂದ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ತ್ವರಿತವಾಗಿ ದೊರೆಯುವಂತೆ ಮಾಡಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಆಹಾರ ಪದ್ಧತಿಯಲ್ಲಿ ಬದಲಾವಣೆ ಅಗತ್ಯ: ಸಾರ್ವಜನಿಕರು ತಮ್ಮ ಆಹಾರ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಅತಿಯಾದ ಎಣ್ಣೆ, ಉಪ್ಪು ಹಾಗೂ ಸಕ್ಕರೆ ಸೇವನೆಯಿಂದ ದೂರವಿದ್ದು, ಆರೋಗ್ಯಕರ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಅಲ್ಲದೆ, ಜನರ ಆರೋಗ್ಯದ ದೃಷ್ಟಿಯಿಂದ ಹೋಟೆಲ್‌ಗಳು ಹಾಗೂ ಬೀದಿಬದಿ ತಿಂಡಿ-ತಿನಿಸುಗಳ ಮಾರಾಟಗಾರರು ಬ್ರಾಂಡೆಡ್ ಅಡುಗೆ ಎಣ್ಣೆಯನ್ನೇ ಬಳಸುವಂತೆ ನಿಯಮ ಜಾರಿಗೆ ತರಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.

ಆಹಾರ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.