ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಇಂದು (ಅ.11) ಚಾಲನೆ ದೊರೆಯಲಿದೆ. ನಾಡಹಬ್ಬದ ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿಬೆಟ್ಟ ಸಜ್ಜಾಗಿದ್ದು, ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗೆ ನಿಗದಿಯಾಗಿರುವ ಶುಭ ಮುಹೂರ್ತದಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ.
ಈ ಬಾರಿ 11 ದಿನಗಳ ಕಾಲ ನಡೆಯಲಿರುವ ದಸರಾ ಮಹೋತ್ಸವ ಅಕ್ಟೋಬರ್ 21ರಂದು ವಿಜಯದಶಮಿಯ ಜಂಬೂ ಸವಾರಿಯೊಂದಿಗೆ ಮುಕ್ತಾಯಗೊಳ್ಳಲಿದೆ.
ನಾಡಹಬ್ಬದ ಉದ್ಘಾಟನಾ ಸಮಾರಂಭ, ಮೈಸೂರು ಅರಮನೆಯ ವೈಭವ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದಸರಾ ಮಹೋತ್ಸವದ ಪ್ರಮುಖ ಕ್ಷಣಗಳನ್ನು ಮನೆಯಲ್ಲೇ ಕುಳಿತು ವೀಕ್ಷಿಸಬಹುದು.
ಮೈಸೂರು ದಸರಾ ನೇರಪ್ರಸಾರ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ https://www.youtube.com/live/hbLUvl8P2vY
ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ರಾಜವೈಭವ ಮತ್ತು ಧಾರ್ಮಿಕ ಸಂಭ್ರಮದ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವದ ಸಂಭ್ರಮವನ್ನು ನೇರಪ್ರಸಾರದ ಮೂಲಕ ಕಣ್ತುಂಬಿಕೊಳ್ಳಿ.






















