SK Home Ad
Home ನಮ್ಮ ಜಿಲ್ಲೆ ಬೆಳಗಾವಿ ದುರ್ಗಾಮಾತಾ ಮೂರ್ತಿ ಮೆರವಣಿಗೆಯಲ್ಲಿ ಭೀಕರ ದುರಂತ; ಟ್ರಕ್ ಡಿಕ್ಕಿಗೆ ಮೂವರು ಬಲಿ

ದುರ್ಗಾಮಾತಾ ಮೂರ್ತಿ ಮೆರವಣಿಗೆಯಲ್ಲಿ ಭೀಕರ ದುರಂತ; ಟ್ರಕ್ ಡಿಕ್ಕಿಗೆ ಮೂವರು ಬಲಿ

0
187

ಹುಕ್ಕೇರಿ: ದುರ್ಗಾಮಾತಾ ದೇವಿಯ ಮೂರ್ತಿಯನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುವ ಸಂಭ್ರಮದಲ್ಲಿದ್ದ ಭಕ್ತರಿಗೆ ಭೀಕರ ಅಪಘಾತ ಆಘಾತ ನೀಡಿದೆ.

ಬೆಳಗಾವಿಯಿಂದ ಹುಕ್ಕೇರಿ ತಾಲ್ಲೂಕಿನ ಹಣಜ್ಯಾನಟ್ಟಿಗೆ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ, ಮನಗುತ್ತಿ ಗ್ರಾಮದ ಸಮೀಪ ಹಿಂದಿನಿಂದ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಸಂಭವಿಸಿದ ಈ ಅಪಘಾತದಲ್ಲಿ ಪ್ರಕಾಶ ವಾಸೇದಾರ, ದಾನಪ್ಪ ಜಾಗನೂರೆ ಹಾಗೂ ಶಿವಪ್ಪ ಖಾನಾಪುರೆ ಮೃತಪಟ್ಟಿದ್ದಾರೆ. ಮೆರವಣಿಗೆಯ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಘಟನೆಯಿಂದಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.