SK Home Ad
Home ಸುದ್ದಿ ರಾಜ್ಯ ಮೈಸೂರು ದಸರಾ ಮಹೋತ್ಸವಕ್ಕೆ ಗವಿಶ್ರೀಗಳಿಂದ ಚಾಲನೆ

ಮೈಸೂರು ದಸರಾ ಮಹೋತ್ಸವಕ್ಕೆ ಗವಿಶ್ರೀಗಳಿಂದ ಚಾಲನೆ

0
48

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಮುಂಡಿ ಬೆಟ್ಟದಲ್ಲಿ ಅಧಿಕೃತವಾಗಿ ಉದ್ಘಾಟಿಸಿದರು.

ಗವಿಸಿದ್ಧೇಶ್ವರ ಶ್ರೀಗಳು ದೀಪ ಬೆಳಗಿಸಿ, ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿ, ಕೆ.ಎಸ್. ಬಸವಂತಪ್ಪ, ರಿಜ್ವಾನ್ ಅರ್ಷದ್, ಶಿವರಾಜ ತಂಗಡಗಿ, ಅಜಯ್ ಸಿಂಗ್, ಸಂಸದ ಸುನೀಲ್ ಬೋಸ್, ಶಾಸಕರಾದ ಎಚ್.ಸಿ. ಮಹದೇವಪ್ಪ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಕೆ. ವೆಂಕಟೇಶ್, ಜಿ.ಟಿ. ದೇವೆಗೌಡ, ದರ್ಶನ್ ದ್ರುವನಾರಾಯಣ್, ಎ.ಆರ್. ಕೃಷ್ಣಮೂರ್ತಿ, ಡಿ.ರವಿಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.