ಬೆಂಗಳೂರು: ‘ಪ್ರೇಮದ ಊರಲಿ’ ಚಿತ್ರದ ಒಟಿಟಿ ಹಾಗೂ ಪ್ರಸಾರ ಹಕ್ಕುಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ಚಿತ್ರತಂಡ ಅಧಿಕೃತ ಸ್ಪಷ್ಟನೆ ನೀಡಿದೆ.
ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್ ಪ್ರಸಾರ ಹಕ್ಕುಗಳ ಕುರಿತು ಯಾವುದೇ ಅನಧಿಕೃತ ಮಾಹಿತಿ ಅಥವಾ ಊಹಾಪೋಹಗಳನ್ನು ನಂಬಬಾರದು ಎಂದು ಚಿತ್ರತಂಡ ಮನವಿ ಮಾಡಿದೆ.

‘ಪ್ರೇಮದ ಊರಲಿ’ ಚಿತ್ರದ ಒಟಿಟಿ ಪ್ರಸಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಸಂಸ್ಥೆ ಅಥವಾ ವೇದಿಕೆಯೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲ. ಅಲ್ಲದೆ, ಟಿವಿ ಪ್ರಸಾರ ಹಕ್ಕುಗಳ ಬಗ್ಗೆಯೂ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಲಾಗಿದೆ.
ಚಿತ್ರಮಂದಿರಗಳಲ್ಲಿ ಚಿತ್ರವನ್ನು ವೀಕ್ಷಿಸುವ ಮೂಲಕ ಪ್ರೇಕ್ಷಕರು ಅದರ ಸಂಪೂರ್ಣ ಅನುಭವವನ್ನು ಆಸ್ವಾದಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದೆ. ಒಟಿಟಿ ಹಾಗೂ ಟಿವಿ ಪ್ರಸಾರದ ಕುರಿತು ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಲಭ್ಯವಾದರೆ ಅದನ್ನು ಚಿತ್ರತಂಡವೇ ನೇರವಾಗಿ ಪ್ರಕಟಿಸಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಚಿತ್ರಕ್ಕೆ ಪ್ರೀತಿ ಹಾಗೂ ಬೆಂಬಲ ನೀಡುತ್ತಿರುವ ಪ್ರೇಕ್ಷಕರಿಗೆ ಚಿತ್ರತಂಡ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದೆ.






















