ಶಿವಮೊಗ್ಗ ವಿಮಾನ ನಿಲ್ದಾಣ ಆರ್ಥಿಕ ಚೇತರಿಕೆಯನ್ನು ತರಲಿ: ಮೋದಿ

0
7
ಶಿವಮೊಗ್ಗ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ. ಫೆಬ್ರವರಿ 27ರ ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗದ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಡ್ರೋನ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾದ ಶಿವಮೊಗ್ಗ ವಿಮಾನ ನಿಲ್ದಾಣದ ವಿಡಿಯೋವನ್ನು ಗುರುವಾರ ಟ್ವೀಟ್‌ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಈ ಟ್ವೀಟ್‌ ಉಲ್ಲೇಖಿಸಿ ಶುಕ್ರವಾರ ವಿಮಾನ ನಿಲ್ದಾಣದ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ’ ಎಂದು ನರೇಂದ್ರ ಮೋದಿ ಟ್ವೀಟ್‌ನಲ್ಲಿ ಹಾರೈಸಿದ್ದಾರೆ.

Previous articleಉತ್ತಮ ಪ್ರಜಾಕೀಯ ಪಕ್ಷಕ್ಕೆ ʼಆಟೋ ರಿಕ್ಷಾ’
Next article5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ