SK Home Ad
Home ನಮ್ಮ ಜಿಲ್ಲೆ ಬೆಳಗಾವಿ ಕಬ್ಬು ಬೆಳೆಗಾರರ ಆಕ್ರೋಶ: ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರ ದಿಢೀರ್ ಪ್ರತಿಭಟನೆ

ಕಬ್ಬು ಬೆಳೆಗಾರರ ಆಕ್ರೋಶ: ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರ ದಿಢೀರ್ ಪ್ರತಿಭಟನೆ

0
90

ಬೆಳಗಾವಿ: ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಸೋಮವಾರ ಸಂಜೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್‌ ಪ್ಲಾಜಾದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ರೈತ ನಾಯಕ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಜಮಾಯಿಸಿದ ರೈತರು ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ಯಾವುದೇ ನಿರ್ಣಯವಿಲ್ಲದೆ ಮುಕ್ತಾಯಗೊಂಡಿದೆ. ದೆಹಲಿಗೆ ಕರೆಸಿಕೊಂಡು ಬೇಡಿಕೆ ಈಡೇರಿಸದೆ ರೈತರನ್ನು ಅವಮಾನಿಸಿದ್ದೀರಿ. ಮಾತುಕತೆಯ ಹೆಸರಿನಲ್ಲಿ ಇನ್ನಷ್ಟು ಕಾಲ ದೂಡುವುದನ್ನು ಸಹಿಸುವುದಿಲ್ಲ ಎಂದು ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ.

ಮಂಗಳವಾರದಿಂದ ರಾಜ್ಯಾದ್ಯಂತ ಹೆದ್ದಾರಿ ತಡೆ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ರಾಜ್ಯಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಇದರಿಂದ ರಾಜ್ಯದ ವಿವಿಧೆಡೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ.