SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗ ಬಳಿ ಹಿಟ್ ಅಂಡ್ ರನ್: ಮರಿ ಚಿರತೆ ಬಲಿ

ಚಿತ್ರದುರ್ಗ ಬಳಿ ಹಿಟ್ ಅಂಡ್ ರನ್: ಮರಿ ಚಿರತೆ ಬಲಿ

0
79
(File Photo)

ಚಿತ್ರದುರ್ಗ: ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಚಿರತೆ ಮರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಿರತೆ ಮರಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ನಂತರ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ಇಲಾಖೆ ನಿಯಮದಂತೆ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ವಾಹನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.