SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಮದುವೆಯಾಗಿ ಮೂರು ವರ್ಷಕ್ಕೆ ದುರಂತ ಅಂತ್ಯ; ಲವ್‌ ಜಿಹಾದ್‌ ಆರೋಪ

ಮದುವೆಯಾಗಿ ಮೂರು ವರ್ಷಕ್ಕೆ ದುರಂತ ಅಂತ್ಯ; ಲವ್‌ ಜಿಹಾದ್‌ ಆರೋಪ

0
57

ಚಿತ್ರದುರ್ಗ: ಜಿಲ್ಲೆಯ ಹೊಸಯಳನಾಡು ಗ್ರಾಮದ ಆಶಾ (30) ಎಂಬ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ಆರೋಪ ಮಾಡಿವೆ. ಪ್ರಕರಣದ ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರತರಬೇಕು ಎಂದು ಆಗ್ರಹಿಸಿ ಸಂಘಟನೆಗಳ ಕಾರ್ಯಕರ್ತರು ಹಿರಿಯೂರು ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಹಿರಿಯೂರು ಪಟ್ಟಣದ ಇಮ್ರಾನ್ (40) ಎಂಬಾತನನ್ನು ಆಶಾ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ. ಮದುವೆಯ ಬಳಿಕ ಪತಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎಂದು ಆಶಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿಂದೆ ಒಂದು ಲಕ್ಷ ರೂಪಾಯಿ ಹಣವನ್ನೂ ನೀಡಿದ್ದೆವು ಎಂದು ಆಶಾ ತಂದೆ ನಾಗರಾಜ್ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಆಶಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಆಶಾ ತಂದೆ ನಾಗರಾಜ್ ಅವರು ಹಿರಿಯೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣವನ್ನು ಲವ್ ಜಿಹಾದ್ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ, ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.