SK Home Ad
Home ನಮ್ಮ ಜಿಲ್ಲೆ ವಿಜಯನಗರ ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

0
188

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದ ಬಳಿಯ ಬಂಬೂ ಬಜಾರ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆಗೆ ಬಿದಿರುಗಳು ಧಗಧಗನೆ ಹೊತ್ತಿ ಉರಿದಿವೆ. ಬೆಂಕಿಯ ತೀವ್ರತೆಗೆ ಸ್ಥಳದಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆಮಾಡಿತ್ತು. ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸ್ಥಳದಲ್ಲಿ ಜನರು ಜಮಾಯಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬೆಂಕಿ ನಂದಿಸುವ ಕಾರ್ಯಕ್ಕೆ ಸ್ಥಳೀಯರು ಕೈಜೋಡಿಸಿದರು. ನಗರದ ಜನನಿಬಿಡ ಪ್ರದೇಶದ ಸಮೀಪವೇ ಈ ಅಗ್ನಿ ಅವಘಡ ಸಂಭವಿಸಿರುವುದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.