SK Home Ad
Home ನಮ್ಮ ಜಿಲ್ಲೆ ಮೈಸೂರು ಮೈಸೂರು ದಸರಾ ವೇಳೆ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ: ಆರೋಪಿಗೆ ಮರಣದಂಡನೆ ಶಿಕ್ಷೆ

ಮೈಸೂರು ದಸರಾ ವೇಳೆ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ: ಆರೋಪಿಗೆ ಮರಣದಂಡನೆ ಶಿಕ್ಷೆ

0
72
(File Photo)

ಮೈಸೂರು: ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಕುಟುಂಬದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಕಾರ್ತಿಕ್‌ನನ್ನು ಮೈಸೂರಿನ ತ್ವರಿತಗತಿ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 32 ವರ್ಷದ ಕಾರ್ತಿಕ್ ಎಂಬಾತನಿಗೆ ಈ ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

ಬಾಲಕಿ ದಸರಾ ವೇಳೆ ಕುಟುಂಬದೊಂದಿಗೆ ಮೈಸೂರಿಗೆ ಬಂದಿದ್ದಳು – ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಯ ಪತ್ತೆ : ಕಲಬುರಗಿಯಿಂದ ಕುಟುಂಬದೊಂದಿಗೆ ಮೈಸೂರಿಗೆ ಬಲೂನ್‌ ಮತ್ತು ಆಟಿಕೆಗಳನ್ನು ಮಾರಾಟ ಮಾಡಲು ಬಂದಿದ್ದ ಬಾಲಕಿ, ದಸರಾ ವಸ್ತುಪ್ರದರ್ಶನದ ಸಮೀಪ ತಾತ್ಕಾಲಿಕ ಟೆಂಟ್‌ನಲ್ಲಿ ಕುಟುಂಬದವರೊಂದಿಗೆ ಮಲಗಿದ್ದಳು. 2025ರ ಅಕ್ಟೋಬರ್‌ 8ರ ರಾತ್ರಿ ಮತ್ತು ಅಕ್ಟೋಬರ್‌ 9ರ ಬೆಳಗಿನ ಜಾವದ ನಡುವೆ ಈ ದುರ್ಘಟನೆ ನಡೆದಿತ್ತು. ಬಾಲಕಿ ಕಾಣೆಯಾಗಿರುವುದು ತಿಳಿದ ಬಳಿಕ ಕುಟುಂಬದವರು ಹುಡುಕಾಟ ನಡೆಸಿದಾಗ, ಟೆಂಟ್‌ನ ಸಮೀಪವೇ ಆಕೆಯ ಮೃತದೇಹ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ನಜರಬಾದ್‌ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಿದರು. ಅದರ ಆಧಾರದಲ್ಲಿ ಮೈಸೂರಿನ ಸಿದ್ದಲಿಂಗಪುರದ ನಿವಾಸಿ ಕಾರ್ತಿಕ್‌ನನ್ನು ಗುರುತಿಸಿ, ಘಟನೆ ನಡೆದ 24 ಗಂಟೆಗಳೊಳಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಬಂಧಿಸಿದ್ದರು. ಬಂಧನದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದರು.