ಚಿತ್ರದುರ್ಗ: ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಮನೆಗಳ್ಳತನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ 14ರಂದು ಯತೀಶ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಡಿವೈಎಸ್ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಚಿತ್ರದುರ್ಗದ ಸೈಯದ್ ಪಾಷಾ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ 2 ಲಕ್ಷ ರೂ. ನಗದು ಹಾಗೂ 1.64 ಲಕ್ಷ ರೂ. ಮೌಲ್ಯದ ಐಫೋನ್ 18 ಪ್ರೋ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಒಟ್ಟು 3.64 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.





















