ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪತ್ನಿಯ ಹೆಸರಿನಲ್ಲಿ ನಕಲಿ ಮತದಾನ ಆರೋಪ; ತನಿಖೆಗೆ ಬಿಜೆಪಿ ಆಗ್ರಹ
ಹಾವೇರಿ: ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ನಗರದ ತಹಸೀಲ್ದಾರ್ ಕಚೇರಿ ಮತಗಟ್ಟೆಯಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಮತದಾನ ಮಾಡಿರುವ ಆರೋಪ ಶನಿವಾರ ಕೇಳಿಬಂದಿದೆ.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿ ಆಶಾ ಪಾಟೀಲ ಅವರ ಹೆಸರಿನಲ್ಲಿ ಬೇರೆ ಮಹಿಳೆಯೊಬ್ಬರು ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.
ಆಶಾ ಪಾಟೀಲ ಅವರ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಬಳಸಿ ಮತದಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಮತಗಟ್ಟೆಗೆ ಬಂದಿದ್ದ ಮಹಿಳೆ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಜೀವಕುಮಾರ ನೀರಲಗಿ, ‘ನನ್ನ ಪತ್ನಿಯ ಹೆಸರಿನಲ್ಲಿ ನಕಲಿ ಮತದಾನ ನಡೆದಿರುವುದು ಶುಕ್ರವಾರ ರಾತ್ರಿ ಗಮನಕ್ಕೆ ಬಂದಿದೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಮತದಾನ ಮಾಡಿಸಿದೆ ಎಂದು ಅವರು ಆರೋಪಿಸಿದ್ದಾರೆ.
- ನ್ಯೂಜಿಲೆಂಡ್ ವಿರುದ್ಧ ರೋಚಕ ಜಯ : T20 ಸರಣಿಯಲ್ಲಿ ಭಾರತಕ್ಕೆ 2–0 ಮುನ್ನಡೆ
- ಸಚಿವರ ಜತೆ ಬಂದಿದ್ದ ಮಹಿಳೆಯಿಂದ ನಕಲಿ ಮತದಾನದ ಆರೋಪ
- ಗೋಲ್ಡನ್ ಚಾರಿಯಟ್ಗೆ ಹಸಿರು ನಿಶಾನೆ: ‘ಪ್ರೈಡ್ ಆಫ್ ಕರ್ನಾಟಕ’ ಯಾನ ಆರಂಭ
- ಮಾರಕ ಮಾಂಜಾ ವಿರುದ್ಧ ಹು- ಧಾ ಪೊಲೀಸರ ಸರ್ಜಿಕಲ್ ಸ್ಟ್ರೈಕ್ ,16 ಪ್ರಕರಣ ದಾಖಲು
- ಆಸ್ಪತ್ರೆಗಳಲ್ಲಿ ಏಕಬಳಕೆಯ ವೈದ್ಯಕೀಯ ಸಾಧನಗಳ ಮರುಬಳಕೆಗೆ ಕಟ್ಟುನಿಟ್ಟಿನ ನಿಷೇಧ






















