SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಜವನಗೊಂಡನಹಳ್ಳಿ ಬಳಿ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ

ಜವನಗೊಂಡನಹಳ್ಳಿ ಬಳಿ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ

0
18

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆ ಕುಷ್ಟಗಿ ಮೂಲದ ಮಾರುತಿ (30) ಮೃತ ಯುವಕ. ಮಧು ಗಾಯಗೊಂಡಿದ್ದವರು ಎಂದು ಗುರುತಿಸಲಾಗಿದ್ದು, ಆತನನ್ನು ಕೂಡಲೇ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವರ: ಮಾರುತಿ ಮತ್ತು ಮಧು ಇಬ್ಬರೂ ಬೆಂಗಳೂರಿನಿಂದ ತಮ್ಮ ಊರಾದ ಕೊಪ್ಪಳ ಜಿಲ್ಲೆ ಕುಷ್ಟಗಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದ ನಂತರ ಆರೋಪಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.