ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವಕ್ಕೆ ಚಾಲನೆ

0
10

ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.
ಇದಕ್ಕೂ ಮುನ್ನ ದೆಹಲಿ ಕನ್ನಡಿಗರು ಪ್ರಧಾನಿ ಮೋದಿಯವರಿಗೆ ಪೂರ್ಣಕುಂಭ ಸ್ವಾಗತ ಕೋರಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಸುನೀಲ್ ಕುಮಾರ್, ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥಶ್ರೀ, ನಂಜಾವಧೂತಶ್ರೀ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ, ಮೈಸೂರು ಅರಮನೆಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​, ಧರ್ಮಸ್ಥಳದ ಧರ್ಮಾಧಿಕಾರಿ, ಸಂಸದ ಡಾ.‌ವೀರೇಂದ್ರ ಹೆಗಡೆ ಭಾಗಿಯಾಗಿದ್ದು, ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಹೆಚ್ಚು ಹೊರನಾಡು ಕನ್ನಡಿಗರು ಭಾಗಿಯಾಗಿದ್ದಾರೆ.

Previous articleಜನಪ್ರತಿನಿಧಿಗಳು ಅಭಿವೃದ್ಧಿಗೆ ಯತ್ನಿಸಲಿ
Next articleಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ: ಇಬ್ಬರು ಗಂಭೀರ