SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಯುವಕ ಆತ್ಮಹತ್ಯೆ: ಠಾಣೆ ಮುಂಭಾಗ ಶವವಿಟ್ಟು ಪ್ರತಿಭಟನೆ, ಹೆದ್ದಾರಿ ಸಂಚಾರ ವ್ಯತ್ಯಯ

ಯುವಕ ಆತ್ಮಹತ್ಯೆ: ಠಾಣೆ ಮುಂಭಾಗ ಶವವಿಟ್ಟು ಪ್ರತಿಭಟನೆ, ಹೆದ್ದಾರಿ ಸಂಚಾರ ವ್ಯತ್ಯಯ

0
52

ಮಂಗಳೂರು: ಪೊಲೀಸರ ವಿಚಾರಣೆಯಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂಭಾಗವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಇಂದು ರಾತ್ರಿ ನಡೆದಿದ್ದು ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು.

ಸುರತ್ಕಲ್‌ನ ಹೊಸಬೆಟ್ಟು ನಿವಾಸಿ ಸೋಮನಾಥ (48) ಆತ್ಮಹತ್ಯೆ ಮಾಡಿಕೊಂಡವರು. ಅಕ್ಟೋಬರ್ 25ರ ರಾತ್ರಿ ಹೊಸಬೆಟ್ಟು ಬೀಚ್ ಬಳಿ ಯುವ ಜೋಡಿಯೊಂದನ್ನು ಪ್ರಶ್ನಿಸಿದ ವಿಚಾರವಾಗಿ ಸೋಮನಾಥ ಹಾಗೂ ಯುವಕರ ತಂಡದ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.

ಈ ಸಂಬಂಧ ಯುವ ಜೋಡಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸೋಮನಾಥ ಅವರನ್ನು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ತಾನೇ ಹೊಣೆ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.

ಪೊಲೀಸ್ ದೌರ್ಜನ್ಯದ ಆರೋಪ: ಪೊಲೀಸ್ ವಿಚಾರಣೆಯಿಂದ ಮನನೊಂದು ಸೋಮನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಸ್ಥಳೀಯರು, ಪೊಲೀಸ್ ದೌರ್ಜನ್ಯದ ಬಗ್ಗೆಯೂ ದೂರಿದ್ದಾರೆ ಮೃತದೇಹವನ್ನು ಠಾಣೆಯ ಮುಂಭಾಗವಿಟ್ಟು ಪ್ರತಿಭಟನೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಪೊಲೀಸರೊಂದಿಗೆ ಮಾತುಕತೆ ನಡೆಸಿದರು.