ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲಿಯೇ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಬಾರಿ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆ ಕಾರ್ಯ ಗುಲಬರ್ಗಾ ವಿಶ್ವವಿದ್ಯಾಲಯ ಗಣಿತ ವಿಭಾಗದ ಭಾಸ್ಕರ್ ಹಾಲ್ನಲ್ಲಿ ಶಾಂತಿಯುತವಾಗಿ ಜರುಗಿತು. ಕ್ಷೇತ್ರದ ಒಟ್ಟು 34,784 ಮತದಾರರ ಪೈಕಿ ಚಲಾವಣೆಯಾದ 30,253 ಮತಗಳ ಪ್ರಥಮ ಪ್ರಾಶಸ್ತ್ಯ ಮತ ಎಣಿಕೆ ಕಾರ್ಯ ಒಟ್ಟು ಮೂರು ಸುತ್ತಿನಲ್ಲಿ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರು 12,299 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಶಶೀಲ ಜಿ. ನಮೋಶಿ ಅವರು 15,596 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ನಮೋಶಿ ಅವರು 3,297 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.






















