SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಮೀಸಲಾತಿ ಕಾಯ್ದೆ ರದ್ದು: ಮೋದಿ ಮೇಲೆ ಗೂಬೆ ಕೂರಿಸುವುದೇಕೆ?

ಮೀಸಲಾತಿ ಕಾಯ್ದೆ ರದ್ದು: ಮೋದಿ ಮೇಲೆ ಗೂಬೆ ಕೂರಿಸುವುದೇಕೆ?

0
65

ದಾವಣಗೆರೆ: ರಾಜ್ಯದಲ್ಲಿ ಒಟ್ಟಾರೆ ಮೀಸಲಾತಿಯನ್ನು ಶೇ. 56ಕ್ಕೆ ಹೆಚ್ಚಿಸಿ ಜಾರಿಗೆ ತರಲು ರೂಪಿಸಿದ್ದ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿರುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂಡದ ವಿರುದ್ಧ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ನ್ಯಾಯಾಲಯದಲ್ಲಿ ಸೂಕ್ತ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಧಾನಿ ಮೋದಿ ಅವರ ಮೇಲೆ ಆರೋಪ ಮಾಡುತ್ತಿದೆ ಎಂದು ದೂರಿದರು.

ಸುಪ್ರೀಂ ಕೋರ್ಟ್ ಆದೇಶವನ್ನು ಸಮರ್ಪಕವಾಗಿ ಬಳಸಿಕೊಂಡು ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಪಟ ನಾಟಕವಾಡಿ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ನಾಯಕರು, ಈಗ ತಮ್ಮ ತಪ್ಪು ಮುಚ್ಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಗೂಬೆ ಕೂರಿಸಲು ಹೊರಟಿದ್ದಾರೆ” ಎಂದು ಕಿಡಿಕಾರಿದರು.

ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳುವ ಬದಲು ರಾಜಕೀಯ ಹೇಳಿಕೆಗಳ ಮೂಲಕ ಜನರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ವಿರೋಧ ಪಕ್ಷದ ನಾಯಕರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.