SK Home Ad
Home ನಮ್ಮ ಜಿಲ್ಲೆ ಯಾದಗಿರಿ ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

0
148

ಸೈದಾಪುರ: ಕೃಷಿ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರು ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೈದಾಪುರ ಹೊರವಲಯದ ಎನ್‌ಎಚ್‌-150 ರಾಷ್ಟ್ರೀಯ ಹೆದ್ದಾರಿಯ ಕರಿಬೆಟ್ಟ ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಅಪಘಾತದಲ್ಲಿ ಸೈದಾಪುರ ಗ್ರಾಮದ ಬಸವಲಿಂಗಮ್ಮ (55), ಅವರ ಪುತ್ರ ತಿಮ್ಮಣ್ಣ (30) ಹಾಗೂ ಸೊಸೆ ನಾಗಮ್ಮ (26) ಮೃತಪಟ್ಟಿದ್ದಾರೆ.

ಮೂವರು ಕೃಷಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೂವರೂ ಮೃತಪಟ್ಟಿದ್ದಾರೆ.

ಒಂದೇ ಕುಟುಂಬದ ಮೂವರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.