SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಸೌಜನ್ಯ ಪ್ರಕರಣ: SIT ಕಚೇರಿಗೆ ನೂತನ ಐಜಿಪಿ ಚೇತನ್‌ ಆಗಮನ

ಸೌಜನ್ಯ ಪ್ರಕರಣ: SIT ಕಚೇರಿಗೆ ನೂತನ ಐಜಿಪಿ ಚೇತನ್‌ ಆಗಮನ

0
52

ಮಂಗಳೂರು: ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೂತನ ಮುಖ್ಯಸ್ಥ ಐಜಿಪಿ ಚೇತನ್ ಸಿಂಗ್ ರಾಥೋಡ್ ಮೊದಲ ಬಾರಿಗೆ ಇಂದು ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಎಸ್‌ಐಟಿ ತಂಡದ ಸದಸ್ಯರಾದ ಸುಧೀರ್ ಕುಮಾರ್ ರೆಡ್ಡಿ ಹಾಗೂ ನಿಶಾ ಜೇಮ್ಸ್, ಲೋಕೇಶ್ ಜಗಲ್ ಸಾರ್ ಸೇರಿದಂತೆ ತಂಡದ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ತನಿಖೆಯ ಮುಂದಿನ ಹಂತಗಳು ಹಾಗೂ ಕಾರ್ಯತಂತ್ರಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಪ್ರಕರಣದ ಮರುತನಿಖೆ ಪ್ರಕ್ರಿಯೆಯನ್ನು ಎಸ್‌ಐಟಿ ಚುರುಕುಗೊಳಿಸಿದ ನಂತರ ಸೋಮವಾರ ಮಧ್ಯಾಹ್ನ ಬಾಲಕಿಯ ತಾಯಿ ಹಾಗೂ ಕುಟುಂಬಸ್ಥರು ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾದರು.